ಚಿಕ್ಕಬಳ್ಳಾಪುರ: ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದಿಂದ ಏ. 24ರಂದು ಕರ್ನಾಟಕ ಜನ ಚೈತನ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಭಾಗವಾಗಿ 25ರಂದು ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ಹುತಾತ್ಮರ ಸ್ಮರಣಾ ಸಭೆ ನಡೆಯಲಿದೆ ಎಂದು ಪಕ್ಷದ ಜಂಟಿ ಕಾರ್ಯದರ್ಶಿ ಜಿ.ಎನ್. ರಮೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಹಾಗೂ ಪ್ರಾಮಾಣಿಕ ರಾಜಕಾರಣ ಸ್ಥಾಪನೆಗಾಗಿ ಪಕ್ಷವು ಜನಚೈತನ್ಯ ಯಾತ್ರೆ ಹಮ್ಮಿಕೊಂಡಿದೆ. ಮೊದಲ ಹಂತದಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ. ಏ. 24ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಯಾತ್ರೆಗೆ ಚಾಲನೆ ದೊರೆಯಲಿದೆ ಎಂದರು.

ಯಾತ್ರೆಗೆ ಸಾಮಾಜಿಕ, ಜನಪರ ಕಳಕಳಿಯುಳ್ಳ ಹೋರಾಟಗಾರರು ಕೈಜೋಡಿಸಿದ್ದಾರೆ. ಸಮಾನ ಮನಸ್ಕ ಪಕ್ಷಗಳೂ ನಮ್ಮೊಂದಿಗೆ ಸೇರಿಕೊಂಡಿವೆ. ಸಮೃದ್ಧಿ ಹಾಗೂ ನೆಮ್ಮದಿಯ ಕರ್ನಾಟಕದ ನಿರ್ಮಾಣಕ್ಕೆ ಕಂಕಣಬದ್ಧ ಪಕ್ಷ ಕೆಲಸ ಮಾಡುತ್ತಿದೆ ಎಂದರು.

ರಾಜಗೋಪಾಲ್, ಮೌಲಾಸಾಬ್, ರಂಜಾನ್ ಸಾಬ್, ರಾಮಾಂಜಿನಪ್ಪ, ಸೊಣ್ಣಪ್ಪಗೌಡ, ಬಾಬಾಜಾನ್, ರಾಕೇಶ್ಬಾಬು ಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.