ಶಿಡ್ಲಘಟ್ಟ: ಡಿಜಿಟಲ್ ತಂತ್ರಜ್ಞಾನ ಬಹಳಷ್ಟು ಮುಂದುವರೆದಿದ್ದು ನಾವು ತಂತ್ರಜ್ಞಾನವನ್ನು ಬಳಸಿಕೊಂಡು ನಮ್ಮ ವೃತ್ತಿಯಲ್ಲಿ ಕೌಶಲವನ್ನು ಮೆರೆಯಬೇಕಿದೆ ಮತ್ತು ಬೆರಳ ತುದಿಯಲ್ಲಿ ಎಲ್ಲ ಮಾಹಿತಿ ಸಿಗುವಂತಾಗಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.

ಮೇಲೂರಿನ ತಮ್ಮ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ಮೊಬೈಲ್ ಹ್ಯಾಂಡ್ಸೆಟ್ ವಿತರಿಸಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನೇಕ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮುಖ್ಯ. ಅನೇಕ ಯೋಜನೆಗಳಿಗೆ ಮೂಲ ಆಧಾರವಾದ ಸಮೀಕ್ಷೆ, ಅಂಕಿ–ಸಂಖ್ಯೆ ಎಲ್ಲವನ್ನೂ ಸಕಾಲಕ್ಕೆ ನಿಖರವಾಗಿ ಸರ್ಕಾರಕ್ಕೆ ಕೊಡುವ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಕೆಲಸದಲ್ಲಿ ಈ ಮೊಬೈಲ್ ನೆರವಿಗೆ ಬರಲಿದೆ. ತಂತ್ರಜ್ಞಾನ ಬೆಳೆಸಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸಿ, ನಾಡಿನ ಅಭಿವೃದ್ದಿಯಲ್ಲಿ ನೀವು ಕೈ ಜೋಡಿಸಿ ಎಂದು ಮನವಿ ಮಾಡಿದರು.

ಶಿಶು ಅಭಿವೃದ್ದಿ ಯೋಜನಾಧಿಕಾರಿ ನವತಾಜ್ ಮಾತನಾಡಿ, ತಾಲ್ಲೂಕಿನಲ್ಲಿ 344 ಅಂಗನವಾಡಿ ಕಾರ್ಯಕರ್ತೆಯರಿಗೆ ಪೋಷಣ್ ಅಭಿಯಾನದಡಿ ಮೊಬೈಲ್ಗಳನ್ನು ಸಾಂಕೇತಿಕವಾಗಿ ಕೆಲವರಿಗೆ ವಿತರಿಸಲಾಗಿದೆ. ಈ ಮೊಬೈಲ್ನಲ್ಲಿರುವ ಆ್ಯಪ್ ಮೂಲಕ ಗರ್ಭಿಣಿ, ಬಾಣಂತಿ, ಮಕ್ಕಳಿಗೆ ಪೌಷ್ಟಿಕ ಆಹಾರ ಸೇರಿದಂತೆ ಇತರೆ ಪದಾರ್ಥಗಳ ವಿತರಣೆ ಮಾಡಿ ಅವುಗಳಿಂದಾಗುವ ಉಪಯೋಗ ಇನ್ನಿತರೆ ಅಂಕಿ ಅಂಶಗಳ ದಾಖಲೀಕರಣವನ್ನು ಮಾಡಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.