ಗೌರಿಬಿದನೂರು: ನಗರದ ಅರವಿಂದ ನಗರ ಬಳಿ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯು ಪೂರ್ಣವಾಗದೆ ವಾಹನಗಳ ಸಂಚಾರಕ್ಕೆ ಸೋಮವಾರ ಅವಕಾಶಕ್ಕೆ ಅಧಿಕಾರಿಗಳು ಅಂಕುಶ ಹಾಕಿದ್ದಾರೆ.

ಮೇ 27ರ ಶನಿವಾರದಂದು ಈ ಕುರಿತು ಪ್ರಜಾವಾಣಿ ಪತ್ರಿಕೆಯು ‘ಇನ್ನೂ ಪೂರ್ಣವಾಗದ ಮೇಲ್ಸೇತುವೆ ಕಾಮಗಾರಿ!’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಮೇಲ್ಸೇತುವೆಯ ಎರಡೂ ಬದಿಯಲ್ಲಿ ಸಿಮೆಂಟ್ ಬ್ಲಾಕ್ಗಳನ್ನು ಅಡ್ಡಲಾಗಿ ಇರಿಸಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ.

5-6 ವರ್ಷಗಳಿಂದ ಆಮೆ ವೇಗದಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಾರಣ ಜನತೆ ಬೇಸತ್ತಿದ್ದರು. ಇದರಿಂದಾಗಿ ಇನ್ನೂ ಕಾಮಗಾರಿಯೇ ಪೂರ್ಣವಾಗದ ಹಾಗೂ ಇನ್ನು ಕಾಮಗಾರಿ ನಡೆಯುತ್ತಿರುವ ಮೇಲ್ಸೇತುವೆ ಮೇಲೆ ವಾಹನಗಳ ಸಂಚಾರ ಆರಂಭವಾಗಿತ್ತು. ಇದರಿಂದ ಅನಾಹುತ ಸಂಭವಿಸಿದರೆ, ಯಾರು ಹೊಣೆ ಎಂಬ ಪ್ರಶ್ನೆ ವ್ಯಕ್ತವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.