ಶುಕ್ರವಾರ, 27 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಪೌಷ್ಟಿಕತೆ ದೂರವಾಗಿಸಲು ಪೋಷಣ ಅಭಿಯಾನ: ನೌತಾಜ್

Published : 27 ಸೆಪ್ಟೆಂಬರ್ 2024, 15:30 IST
Last Updated : 27 ಸೆಪ್ಟೆಂಬರ್ 2024, 15:30 IST
ಫಾಲೋ ಮಾಡಿ
Comments

ಸಾದಲಿ: ‘ಮಗು ಜನಿಸಿದ ಒಂದು ಗಂಟೆಯೊಳಗೆ ಎದೆಹಾಲು ನೀಡುವುದು ಇತ್ತೀಚೆಗೆ ಕಡಿಮೆಯಾಗುತ್ತಿದೆ. ಈ ಬಗ್ಗೆ ಎಲ್ಲರೂ ಜಾಗೃತಿ ವಹಿಸಬೇಕು’ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನೌತಾಜ್ ಹೇಳಿದರು.

ಸಾದಲಿ ಹೋಬಳಿಯ ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಗ್ರಾಮ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆದ ಪೋಷಣ ಅಭಿಯಾನದಲ್ಲಿ ಮಾತನಾಡಿದರು.

‘ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಮಹಿಳೆಯರು, ಗರ್ಭಿಣಿಯರು, ಬಾಣಂತಿಯರು ಸಂಪ್ರದಾಯದ ನೆಪ ಹೇಳಿಕೊಂಡು ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸದೆ ಒಂದೇ ಆಹಾರ ಪದ್ಧತಿ ರೂಢಿಸಿಕೊಂಡಿರುತ್ತಾರೆ. ಇಂತಹ ಏಕ ಆಹಾರ ಪದ್ಧತಿ ಮಹಿಳೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಮಹಿಳೆಯರು ಎಲ್ಲ ಆಹಾರ ಪದಾರ್ಥ, ಸೊಪ್ಪು, ತರಕಾರಿ, ಮೊಟ್ಟೆ, ಮಾಂಸವನ್ನು ನಿಯಮಿತವಾಗಿ ಸೇವಿಸಬೇಕು’ ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿದ್ಯಾ ಎ.ವಸ್ತ್ರದ್ ಮಾತನಾಡಿ, ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪೋಷಕಾಂಶ ಹೊಂದಿರುವ ಆಹಾರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆಗೆ ತಲುಪಿಸುವ ಕಾರ್ಯ ಮಾಡುತ್ತಿದೆ’ ಎಂದರು.

ಪೊಲೀಸ್ ಇಲಾಖೆಯಿಂದ ‘ಬಾಲ್ಯವಿವಾಹ ನಿಲ್ಲಿಸಿ ಮಕ್ಕಳನ್ನು ರಕ್ಷಿಸಿ’ ಎಂಬ ವಾಕ್ಯದೊಂದಿಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರಿಗೂ ಮತ್ತು ಗ್ರಾಮಸ್ಥರಿಗೂ ಅಂಗನವಾಡಿ ಕಾರ್ಯಕರ್ತರಿಗೆ ಅರಿವು ಮೂಡಿಸಲಾಯಿತು.

ಶ್ಯಾಮಲ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಕ್ಷ್ಮಿದೇವಮ್ಮ, ಆರೋಗ್ಯ ಇಲಾಖೆ ನಂದಿನಿ, ಶಿವಪ್ಪ, ಭಾಗ್ಯಮ್ಮ, ಅಶ್ವತ್ಥಮ್ಮ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT