ಬಾಗೇಪಲ್ಲಿ: ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾ ಆವರಣದಲ್ಲಿ ಗುರುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 74ನೇ ಗಣರಾಜ್ಯೋತ್ಸವದ ಕಾರ್ಯಕ್ರಮವನ್ನು ಅದ್ದೂರಿಯಿಂದ ಆಚರಿಸಲಾಯಿತು.

ತಹಶೀಲ್ದಾರ್ ಧ್ವಜಾರೋಹಣ ಮಾಡಿ ಗಣರಾಜ್ಯೋತ್ಸವದ ಸಂದೇಶ ತಿಳಿಸಿದರು. ಆಚೇಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಎಚ್.ಆರ್. ಸುಬ್ರಮಣ್ಯಂ ಸಂವಿಧಾನದ ಬಗ್ಗೆ ಮಾತನಾಡಿದರು. ರೇಷ್ಮೆ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಡಾ. ಚಿನ್ನಕೈವಾರಮಯ್ಯ ಸಂವಿಧಾನದ ಪ್ರತಿಜ್ಞಾ ವಿಧಿ ಬೋಧಿಸಿದರು.

ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮಾತನಾಡಿ, ‘ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗಗಳು ತಮ್ಮ ವೃತ್ತಿಯ ಘನತೆಗೆ ತಕ್ಕಂತೆ ಕಾರ್ಯ ನಿರ್ವಹಿಸಿದರೆ, ಸಂವಿಧಾನಕ್ಕೆ ಅರ್ಥ ಬರುತ್ತದೆ’ ಎಂದು ಹೇಳಿದರು.

ಪೊಲೀಸ್ ಸಿಬ್ಬಂದಿ, ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಕವಾಯತು ಪ್ರದರ್ಶನ ಕಣ್ಮನ ಸೆಳೆಯಿತು.

ಸರ್ಕಲ್ ಇನ್‌ಸ್ಪೆಕ್ಟರ್ಪೆ ಡಿ.ಆರ್. ನಾಗರಾಜ್, ತಹಶೀಲ್ದಾರ್ ಗ್ರೇಡ್-2 ವಿ. ಸುಬ್ರಮಣ್ಯಂ, ಪುರಸಭಾ ಮುಖ್ಯಾಧಿಕಾರಿ ಕೆ. ಮಧುಕರ್, ಅಧ್ಯಕ್ಷೆ ರೇಷ್ಮಾಬಾನು, ಉಪಾಧ್ಯಕ್ಷ ಎ. ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಸಿದ್ದಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ರಂಗಾರೆಡ್ಡಿ, ತಾಲ್ಲೂಕು ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಆರ್. ಹನುಮಂತರೆಡ್ಡಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ. ವೆಂಕಟರವಣಪ್ಪ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.