ಚಿಕ್ಕಬಳ್ಳಾಪುರ: ರೈತರು, ಬಡವರು ಮತ್ತು ದಲಿತರ ಸಮಸ್ಯೆಗಳನ್ನು ಗಮನಕ್ಕೆ ತರಲು ಶಾಸಕ ಪ್ರದೀಪ್ ಈಶ್ವರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಲಭ್ಯರಾಗುತ್ತಿಲ್ಲ. ಅವರು ಸ್ಥಳಕ್ಕೆ ಬರಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪ್ರೊ.ನಂಜುಂಡಸ್ವಾಮಿ ಸ್ಥಾಪಿತ) ಕಾರ್ಯಕರ್ತರು ನಗರದ ತಾಲ್ಲೂಕು ಕಚೇರಿ ಮುಂಭಾಗ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ತಮ್ಮ ಕ್ಷೇತ್ರದ ಹಾಗೂ ತಮ್ಮ ತವರು ಹೋಬಳಿಯ ಸಮಸ್ಯೆಗಳ ವಿಚಾರವಾಗಿ ಮಾತುಕತೆ ನಡೆಸಲು ಭೇಟಿಗಾಗಿ ನಾಲ್ಕು ತಿಂಗಳಿನಿಂದ ಕಾಯುತ್ತಿದ್ದೇವೆ. ಆದರೆ ಶಾಸಕರು ಯಾವುದೇ ರೀತಿಯ ಸಂಪರ್ಕಕ್ಕೂ ದೊರೆಯುತ್ತಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬಡವರು, ದಲಿತರು ಮತ್ತು ರೈತರ ಸಮಸ್ಯೆಗಳನ್ನು ಆಲಿಸಲು ತಮಗೆ ಸಮಯವಿಲ್ಲ. ಆದ್ದರಿಂದ ತಾವೂ ಸೇರಿದಂತೆ ತಾ.ಪಂ ಇಒ, ತಹಶೀಲ್ದಾರ್, ಮುದ್ದೇನಹಳ್ಳಿ ಗ್ರಾ.ಪಂ ಪಿಡಿಒ, ನಂದಿ ಹೋಬಳಿ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆಗಳನ್ನು ಇತ್ಯರ್ಥಪಡಿಸುವವರೆಗೆ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ರೈತ ಸಂಘದ ಅಧ್ಯಕ್ಷ ಜಿ.ಜಿ ಹಳ್ಳಿ ನಾರಾಯಣಸ್ವಾಮಿ ಮಾತನಾಡಿ, ಚುನಾವಣೆ ನಡೆದು 8 ತಿಂಗಳ ಮೇಲಾಗಿದೆ. ಶಾಸಕ ಪ್ರದೀಪ್ ಈಶ್ವರ್ ಯುವಕರಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸುತ್ತಾರೆ ಎಂದುಕೊಂಡಿದ್ದೆವು. ಆದರೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದರೂ ಶಾಸಕರ ಭೇಟಿ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಈ ಹಿಂದಿನ ಶಾಸಕರಿಂದ ತುಂಬಾ ಕಿರುಕುಳ ಅನುಭವಿಸಿದ್ದೇವೆ. ಆದರೆ ಇವರೂ ರೈತರ ಸಮಸ್ಯೆಗಳಿಗೆ, ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಶಾಸಕರು ಸ್ಥಳಕ್ಕೆ ಬರುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ. ಶಾಸಕರು ಸ್ಥಳಕ್ಕೆ ಬಂದು ಅಧಿಕಾರಿಗಳನ್ನು ಕರೆಯಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಕ್ಷೇತ್ರದ ರೈತರ ಸಮಸ್ಯೆಗಳನ್ನು ಆಲಿಸಿದರೆ ಅವರಿಗೂ ಅನುಕೂಲ. ನಾವು ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಹೇಳಿದರು.

ರೈತ ಸಂಘದ ಜಿಲ್ಲಾ ಅಧ್ಯಕ್ಷ ಜಿ.ವಿ.ಶ್ರೀನಿವಾಸ್, ಜಿಲ್ಲಾ ಸಂಚಾಲಕ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಮುನಿವೆಂಕಟರೆಡ್ಡಿ, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಸುಮಾ, ಖಜಾಂಚಿ ಕೆ.ಎನ್.ವೆಂಕಟೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.