ಚಿಕ್ಕಬಳ್ಳಾಪುರ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಚಿಂತಾಮಣಿ ತಾಲ್ಲೂಕು ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜಿ.ಭತ್ತಲಹಳ್ಳಿಯ ರಾಜು (37) ಶಿಕ್ಷೆಗೆ ಒಳಗಾದವನು. ಈತ ತನ್ನ ಸ್ನೇಹಿತನ ಮಗಳನ್ನು 2020ರ ಜೂನ್ನಲ್ಲಿ ಅಪಹರಿಸಿದ್ದ. ಚಿಂತಾಮಣಿ ತಾಲ್ಲೂಕಿನ ಹಳ್ಳಿಯೊಂದರಲ್ಲಿನ ಶೆಡ್ನಲ್ಲಿ ಮತ್ತು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.
.ಚಿಕ್ಕಬಳ್ಳಾಪುರ: ಹೆಣ ಬಿದ್ದಾಗ ಎಚ್ಚರವಾಗುವ ಅಧಿಕಾರಿಗಳು.
ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಸಿಪಿಐ ಕೆ.ಶ್ರೀನಿವಾಸಪ್ಪ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ರಾಜು ವಿಚಾರಣೆಯ ಅವಧಿಯಲ್ಲಿ ಮಧ್ಯಂತರ ಜಾಮೀನು ಪಡೆದಿದ್ದ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. 2024ರ ಜೂನ್ನಲ್ಲಿ ಈತನನ್ನು ಪೊಲೀಸರು ಆಂಧ್ರಪ್ರದೇಶದಲ್ಲಿ ಪತ್ತೆ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
.ಚಿಕ್ಕಬಳ್ಳಾಪುರ: ಬಾಲಭವನ ನಿರ್ಮಾಣಕ್ಕೆ ಕೂಡುತ್ತಿಲ್ಲ ಕಾಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.