ಚಿಂತಾಮಣಿ: ತಾಲ್ಲೂಕಿನ ಕುಬೂರಿನಲ್ಲಿರುವ ರೇಷ್ಮೆ ಕೃಷಿ ಮಹಾವಿದ್ಯಾಲಯದಲ್ಲಿ 16 ಜನ ವಿದ್ಯಾರ್ಥಿಗಳು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಮಹಾವಿದ್ಯಾಲಯದಲ್ಲಿ ಸುಮಾರು 550 ವಿದ್ಯಾರ್ಥಿಗಳಿದ್ದು, ಸದ್ಯ 300 ಜನರಿಗೆ ಟೆಸ್ಟ್ ಮಾಡಲಾಗಿದೆ. ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ.

ಪ್ರಥಮವಾಗಿ ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ 150 ವಿದ್ಯಾರ್ಥಿಗಳಿಗೆ ಬುಧವಾರ ಟೆಸ್ಟ್ ಮಾಡಿದ್ದು ಮತ್ತೊಬ್ಬ ವಿದ್ಯಾರ್ಥಿಗೆ ಪಾಸಿಟಿವ್ ಆಗಿತ್ತು. ಗುರುವಾರ ಟೆಸ್ಟ್ ಮಾಡಿದಾಗ 14 ಜನರಿಗೆ ಪಾಸಿಟಿವ್ ಬಂದಿದೆ. ಒಟ್ಟು 16 ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿದ್ದಾರೆ.

ಗುರುವಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ, ಜಿಲ್ಲಾ ಆರೋಗ್ಯಾಧಿಕಾರಿ ಇಂದಿರಾ ಕಬಾಡೆ, ತಹಶೀಲ್ದಾರ್ ಹನುಮಂತರಾಯಪ್ಪ, ನೋಡಲ್ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿ ಸೂಚನೆಗಳನ್ನು ನೀಡಿದರು.

ಯಾರಿಗೂ ತೀವ್ರತರ ಲಕ್ಷಣಗಳಿಲ್ಲ. ಅವರಿಗೆ ವಿಶೇಷ ವಿಭಾಗದಲ್ಲಿ ಹೋಂ ಐಸೋಲೇಷನ್ ವ್ಯವಸ್ಥೆಯಲ್ಲಿ ಇಡಲಾಗಿದೆ. ಕೊಠಡಿಗಳನ್ನು ಸ್ಯಾನಿಟೈಸರ್ ಮಾಡಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ ತಿಳಿಸಿದರು.

ಕಾಲೇಜಿನ ತರಗತಿಗಳನ್ನು ರದ್ದುಪಡಿಸಲಾಗಿದೆ. ಆನ್‌ಲೈನ್ ತರಗತಿಗಳಿಗೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳಿಗೆ ಲಕ್ಷಣಗಳೇ ಕಂಡುಬಂದಿಲ್ಲ. ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಆರೋಗ್ಯ ಇಲಾಖೆಯ ಸೂಚನೆಯಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಾಲೇಜಿನ ಡೀನ್ ತಿಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.