ಚಿಕ್ಕಬಳ್ಳಾಪುರ: ಆಷಾಢ ಮಾಸದ ಹುಣ್ಣಿಮೆಯ ದಿನವಾದ ಭಾನುವಾರ, ಲಾಕ್‌ಡೌನ್ ನಡುವೆಯೇ ಜಿಲ್ಲೆಯಾದ್ಯಂತ ಸರಳವಾಗಿ ಶ್ರದ್ಧಾಭಕ್ತಿಯಿಂದ ಗುರು ಪೂರ್ಣಿಮೆಯನ್ನು ಆಚರಿಸಲಾಯಿತು.

ಶಿರಡಿ ಸಾಯಿ ಬಾಬಾ ಮಂದಿರಗಳಲ್ಲಿ ದಿನವೀಡಿ ವಿಶೇಷ ಧಾರ್ಮಿಕ ಕೈಂಕರ್ಯಗಳು ಜರುಗಿದವು. ಲಾಕ್‌ಡೌನ್ ಕಾರಣಕ್ಕೆ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ವಿರಳವಾಗಿ ಕಂಡುಬಂತು.

ನಗರದ ಎಂ.ಜಿ.ರಸ್ತೆಯ ಮುನ್ಸಿಪಲ್ ಬಡಾವಣೆಯಲ್ಲಿರುವ ಸಿದ್ಧಿವಿನಾಯಕ, ಶಿರಡಿ ಸಾಯಿಬಾಬಾ ಹಾಗೂ ಅನ್ನಪೂರ್ಣೇಶ್ವರಿ ದೇವಾಲಯ ಮತ್ತು ಎಚ್.ಎಸ್.ಗಾರ್ಡನ್‌ನಲ್ಲಿರುವ ಸುಬ್ರಹ್ಮಣ್ಯೇಶ್ವರ, ಶನೈಶ್ವರ, ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆದವು.

ಈ ಎರಡು ದೇವಸ್ಥಾನಗಳಲ್ಲಿ ಸಾಯಿ ಬಾಬಾ ಅವರ ಮೂರ್ತಿಗಳಿಗೆ ವಿವಿಧ ಅಭಿಷೇಕ ನೆರವೇರಿಸಲಾಯಿತು. ಹೂವಿನ ಅಲಂಕಾರ ಮಾಡಲಾಗಿತ್ತು. ಲಾಕ್‌ಡೌನ್‌ನಿಂದಾಗಿ ಬಾಬಾ ಅವರ ಪಲ್ಲಕ್ಕಿ ಮೆರವಣಿಗೆ ರದ್ದುಪಡಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.