ಶಿಡ್ಲಘಟ್ಟ: ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಜಾವೀದಾ ನಸೀಮಾ ಖಾನಂ ಅವರು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆ ನಡೆಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಶಿಕ್ಷಣ, ಆರೋಗ್ಯ, ಅರಣ್ಯ, ಕೃಷಿ, ರೇಷ್ಮೆ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪಶು ವೈದ್ಯಕೀಯ ಮುಂತಾದ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿಯನ್ನು ಮಂಡಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿ, ತಾಲ್ಲೂಕಿನ ತಲಕಾಯಲಬೆಟ್ಟದ ಬಳಿ ಕೀಟಶಾಸ್ತ್ರಜ್ಞರು ಪರೀಕ್ಷಿಸಿದ ಸೊಳ್ಳೆಯೊಂದರಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತಲಕಾಯಲಬೆಟ್ಟ, ವೆಂಕಟಾಪುರ, ದಿಬ್ಬೂರಹಳ್ಳಿ, ಬಚ್ಚನಹಳ್ಳಿ, ವಡ್ಡಹಳ್ಳಿ ಮುಂತಾದೆಡೆ ಗರ್ಭಿಣಿಯರು ಸೇರಿದಂತೆ ಹಲವಾರು ಗ್ರಾಮಸ್ಥರ ರಕ್ತ ಪರೀಕ್ಷೆ ಮಾಡಿದ್ದೇವೆ. ಯಾರಲ್ಲೂ ಝಿಕಾ ವೈರಸ್ ಕಂಡುಬಂದಿಲ್ಲ. ಮುಂಜಾಗೃತಾ ಕ್ರಮ ಕೈಗೊಂಡಿದ್ದೇವೆ ಎಂದರು.

ಡೆಂಗಿ, ಹಳದಿ ಜ್ವರ, ಮೆದುಳು ಜ್ವರ (ಜಪಾನೀಸ್ ಎನ್ಸೆಫಾಲಿಟಿಸ್) ಹಾಗೂ ವೆಸ್ಟ್ ನೈಲ್ ವೈರಸ್ ಹರಡುವ ಈಡಿಸ್ ಜಾತಿಯ ಸೊಳ್ಳೆ ಕಡಿತದಿಂದ ಝಿಕಾ ವೈರಸ್ ಹರಡುತ್ತದೆ. ತಲೆನೋವು, ಕಣ್ಣು ಕೆಂಪಗಾಗುವುದು, ಜ್ವರ, ಚರ್ಮದ ಮೇಲೆ ಅಲ್ಲಲ್ಲಿ ದದ್ದುಗಳು, ಮೈಕೈ ನೋವು, ಮಾಂಸಖಂಡಗಳ ಸೆಳೆತ, ಕೀಲು ನೋವು ಕಂಡು ಬರುತ್ತವೆ.

ಈ ಲಕ್ಷಣ ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಇದುವರೆಗೆ ಈ ವೈರಸ್ನಿಂದ ರಕ್ಷಣೆ ಪಡೆಯಲು ಯಾವುದೇ ಲಸಿಕೆ ಬಂದಿಲ್ಲ. ಸೊಳ್ಳೆಗಳಿಂದ ಈ ವೈರಸ್ ಹರಡದಂತೆ ಮುಂಜಾಗ್ರತೆ ವಹಿಸುವುದೇ ಇದನ್ನು ತಡೆಯುವ ವಿಧಾನ ಎಂದು ವಿವರಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ ಮಾತನಾಡಿ, ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಹೆಚ್ಚಲು ಅಗತ್ಯ ಕ್ರಮ ಕೈಗೊಂಡಿದ್ದೇವೆ. ವಿದ್ಯಾರ್ಥಿಗಳನ್ನು ಅವರ ಕಲಿಕೆಯ ಆಧಾರದಲ್ಲಿ ಎ, ಬಿ ಮತ್ತು ಸಿ ವರ್ಗಗಗಳೆಂದು ವಿಂಗಡಿಸಿ ಬಿ ಮತ್ತು ಸಿ ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಜಾವೀದಾ ನಸೀಮಾ ಖಾನಂ ಮಾತನಾಡಿ, ಕಳೆದ ವಾರ ಶಿಡ್ಲಘಟ್ಟಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ ನೀಡಿದಾಗ ಶಿಡ್ಲಘಟ್ಟದಲ್ಲಿ ಸೂಕ್ತವಾಗಿ ಕಸ ವಿಲೇವಾರಿ ಆಗುತ್ತಿಲ್ಲ. ಸ್ವಚ್ಛತೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಆಸ್ಪತ್ರೆ, ಬಿಸಿಎಂ ಹಾಸ್ಟೆಲ್ ಇನ್ನಿತರೆ ಕಡೆ ಭೇಟಿ ನೀಡಿದ್ದಾಗ ಸಾರ್ವಜನಿಕರಿಂದಲೂ ದೂರು ಬಂದಿದೆ. ಅದನ್ನು ಅವರು ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸಿದ್ದಾರೆ. ಎಲ್ಲರೂ ಸ್ವಚ್ಛತೆ ಬಗ್ಗೆ ಹೆಚ್ಚಿನ ಒತ್ತು ನೀಡಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.

ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು, ರೇಷ್ಮೆ ಇಲಾಖೆಯ ಎಂ.ಸಿ.ಚಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಗದೀಶ್, ಬಿಸಿಎಂ ಇಲಾಖೆ ಸಂಗಪ್ಪ ಪಾಟೀಲ್, ಸಿಡಿಪಿಒ ಇಲಾಖೆಯ ಮಮತ, ಬಿಸಿಯೂಟದ ಆಂಜನೇಯಲು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.