ಚಿಂತಾಮಣಿ: ತಾಲ್ಲೂಕಿನ ಚಿಲಕಲನೇರ್ಪು ಹೋಬಳಿಯ ಏನಿಗದಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚನಹಳ್ಳಿ ಗ್ರಾಮದ ಬಳಿ ಭಾನುವಾರ ಜಿಂಕೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮೇ 15ರಂದು ಇದೇ ರೀತಿ ಜಿಂಕೆಯೊಂದು ಮೃತಪಟ್ಟಿತ್ತು. ಗ್ರಾಮಸ್ಥರು ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತಪಡಿಸಿದ್ದರು. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಬೋನ್ ಇಟ್ಟಿದ್ದರು. ಗ್ರಾಮದ ರೈತ ಹರೀಶ್ ಎಂಬುವವರ ಜಮೀನಿನಲ್ಲಿ ಜಿಂಕೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.

ಕಳೆದ 10 ದಿನಗಳಲ್ಲಿ ಎರಡು ಜಿಂಕೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಮೇ 15 ರಂದು ಮೃತಪಟ್ಟ ಜಿಂಕೆಯನ್ನು ಕಂಡಾಗ, ಚಿರತೆ ದಾಳಿ ನಡೆಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿ ಅರಣ್ಯ ಇಲಾಖೆಗೆ ದೂರು ನೀಡಿದ್ದೆವು. ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿ ಒಂದು ಬೋನ್ ಇಟ್ಟಿದ್ದರು. ಆದರೂ ಬೋನ್ನಲ್ಲಿ ಯಾವುದೇ ಪ್ರಾಣಿಯನ್ನು ಹಾಕಿರಲಿಲ್ಲ ಎಂದು ಹೇಳಿದರು.

ಜನರ ಭಯ ಅನುಮಾನ ಮಾಯವಾಗುಷ್ಟರಲ್ಲಿ ಮತ್ತೊಂದು ಜಿಂಕೆ ಮೃತಪಟ್ಟಿದೆ. ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಚಿರತೆಯನ್ನು ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.