ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಡಿಬಂಡೆಯಲ್ಲಿ ₹ 2 ಕೋಟಿ ವೆಚ್ಚದಲ್ಲಿ ವಾಲ್ಮೀಕಿ ಭವನ: ಲಕ್ಷ್ಮಿಪತಿರೆಡ್ಡಿ

Published : 4 ಅಕ್ಟೋಬರ್ 2024, 14:23 IST
Last Updated : 4 ಅಕ್ಟೋಬರ್ 2024, 14:23 IST
ಫಾಲೋ ಮಾಡಿ
Comments

ಗುಡಿಬಂಡೆ: ಹಲವು ವರ್ಷಗಳಿಂದ ‌ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಅನುದಾನದ ಕೊರತೆಯಿಂದ ಕಾಮಗಾರಿ ವಿಳಂಬವಾಗಿದೆ. 20 ಗುಂಟೆ ನಿವೇಶನ ಮಂಜೂರು ಅಗಿದೆ ಎಂದು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಕ್ಷ್ಮಿಪತಿರೆಡ್ಡಿ ತಿಳಿಸಿದರು.

ಪಟ್ಟಣದ ತಾಲ್ಲೂಕು ಆಡಳಿತ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ವಾಲ್ಮೀಕಿ ಭವನ ನಿರ್ಮಾಣಕ್ಕೆ ಈಗಾಗಲೇ ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಅಧಿಕಾರಿಗಳಿಂದ ಅಂದಾಜುಪಟ್ಟಿ ಸಿದ್ದಪಡಿಸಲಾಗಿದೆ. ಪರಿಶಿಷ್ಟ ವರ್ಗಗಳ ಕೇಂದ್ರ ಕಚೇರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಸದರಿ ಇಲಾಖೆಯಲ್ಲಿ ಕೆಲವು ತಾಂತ್ರಿಕ ದೋಷಗಳು ಮತ್ತು ಅಗತ್ಯ ಅನುದಾನ ಕೊರತೆಯಿಂದ ಮಂಜೂರು ಮಾಡಲು ವಿಳಂಬವಾಗಿತ್ತು ಎಂದರು.

ದೋಷಗಳು ಸರಿಪಡಿಸಿದ ತಕ್ಷಣ ವಾಲ್ಮೀಕಿ ಭವನಕ್ಕೆ ₹ 2 ಕೋಟಿ ಅನುದಾನ  ನೀಡಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕೇಂದ್ರ ಕಚೇರಿಯಿಂದ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದರು.

ತಹಶೀಲ್ದಾರ್ ಸಿಗ್ಬತ್ತುಲ್ಲಾ ಮಾತನಾಡಿ ವಾಲ್ಮೀಕಿ ಮಹರ್ಷಿ ಕೇವಲ ಒಂದು ಸಮಾಜಕ್ಕೆ ಸೀಮಿತವಲ್ಲ. ನಾವು ಎಲ್ಲಾ ಸಮುದಾಯದವರು ಒಟ್ಟಾಗಿ ಸೇರಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಪಟ್ಟಣದಲ್ಲಿ ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ವಾಲ್ಮೀಕಿ ಜಯಂತಿ ಆಚರಿಸಲು ಸಹಕರಿಸಿ ಬೇಕು ಎಂದರು.

ಜಯಂತಿ ಆಚರಣೆಗೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಮತ್ತು ಪ್ರಗತಿಪರ ಸಂಘಟನೆಗಳು, ಸಂಘ ಸಂಸ್ಥೆಗಳ ಮುಖಂಡರು ಸಲಹೆ ನೀಡಿದರು.

ವಾಲ್ಮೀಕಿ ನಾಯಕ ಸಂಘದ ಸಂಸ್ಥಾಪಕ ಕೆ.ಗೋವಿಂದಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಕೆ.ಕೃಷ್ಣಪ್ಪ, ಕಾರ್ಯದರ್ಶಿ ಮುನಿಕೃಷ್ಣಪ್ಪ, ಶಿಕ್ಷಕ ಶ್ರೀರಾಮರೆಡ್ಡಿ, ರಾಮಾಂಜಿನಪ್ಪ,ರಾಜಪ್ಪ, ಸಂಘದ ಅಧ್ಯಕ್ಷ ಗಂಗಾಧರ ,ಕಾರ್ಯದರ್ಶಿ ‌ಹರೀಶ್, ಮುಖಂಡರಾದ ಎನ್. ಆನಂದ್, ಅಂಜಿನಪ್ಪ ರಾಮಾಂಜಿ, ದ.ಸಂ.ಸ ವೆಂಕಟರಮಣ, ರಾಜು, ಎಲ್.ಎನ್.ಈಶ್ವರಪ್ಪ, ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಮಂಜುನಾಥ್, ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಾಜಿ ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT