ಚಿಂತಾಮಣಿ: ತಾಲ್ಲೂಕಿನ ಕುರುಬೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ದೊಡ್ಡಬೊಮ್ಮನಹಳ್ಳಿಯ ಎಂ. ವೆಂಕಟರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಂ. ವೆಂಕಟರೆಡ್ಡಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಎಂ. ಕೃಷ್ಣಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ, ಚುನಾವಣಾಧಿಕಾರಿ ಪ್ರದೀಪ್ ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ವೆಂಕಟರೆಡ್ಡಿ ಮಾತನಾಡಿ, ಸಂಘದ ವ್ಯಾಪ್ತಿಯ ಎಲ್ಲ ಗ್ರಾಮಗಳ ರೈತರಿಗೆ ವ್ಯವಸಾಯಕ್ಕೆ ಸಂಬಧಿಸಿದ ಉಪಕರಣಗಳು, ರಸಗೊಬ್ಬರ, ಕೀಟನಾಶಕ, ಬಿತ್ತನೆಬೀಜ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಸಂಘದ ನಿರ್ದೇಶಕರು, ವ್ಯವಸ್ಥಾಪಕರು ಮತ್ತು ಸಿಬ್ಬಂದಿಯ ಸಹಕಾರ ಪಡೆದುಕೊಂಡು ಕೆಲಸ ಮಾಡಲಾಗುವುದು ಎಂದು
ತಿಳಿಸಿದರು.

ನಿರ್ದೇಶಕರಾದ ನೇತಾಜಿಗೌಡ, ಕೆ.ಎಂ. ಕೃಷ್ಣಪ್ಪ, ಎಂ. ಶಿವಾರೆಡ್ಡಿ, ಶ್ರೀನಿವಾಸಗೌಡ, ವಿಶ್ವನಾಥರೆಡ್ಡಿ, ಮುನಿವೆಂಕಟಪ್ಪ, ಕೆ.ಎಂ. ನಟರಾಜ್, ಮಲ್ಲಿಕಾರ್ಜುನ ಗೌಡ, ಮುದಸ್ಸಿರ್, ವೆಂಕಟೇಶಮೂರ್ತಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.