ಚಿಕ್ಕಬಳ್ಳಾಪುರ: ಶಾಸಕ ಡಾ.ಕೆ.ಸುಧಾಕರ್ ಅವರಿಗೆ ಎರಡು ದಿನಗಳಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ನೀಡದಿದ್ದರೆ ನಾವು ನಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುತ್ತೇವೆ ಎಂದು ಕ್ಷೇತ್ರದ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿರುವ ಸುಧಾಕರ್ ಅವರ ಬೆಂಬಲಿಗರು ಬುಧವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ‘ಶಾಸಕ ಸುಧಾಕರ್ ಅವರು ಕ್ಷೇತ್ರದಲ್ಲಿ ಪ್ರಬಲವಾಗಿ ಪಕ್ಷ ಸಂಘಟನೆ ಮಾಡಿದ್ದು ಸಹಿಸಿಕೊಳ್ಳಲಾಗದೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉದ್ದೇಶಪೂರ್ವಕವಾಗಿ ಅವರಿಗೆ ಮಂಡಳಿ ಅಧ್ಯಕ್ಷ ಸ್ಥಾನ ನೀಡುತ್ತಿಲ್ಲ’ ಎಂದು ಆರೋಪಿಸಿದರು.

‘ಎರಡು ದಿನಗಳ ಒಳಗೆ ಸುಧಾಕರ್ ಅವರಿಗೆ ಮಂಡಳಿ ಅಧ್ಯಕ್ಷ ಸ್ಥಾನ ನೀಡದಿದ್ದರೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ, ಎಪಿಎಂಸಿ, ಟಿಎಪಿಸಿಎಂಎಸ್, ಪಿಎಲ್ಡಿ ಬ್ಯಾಂಕ್ ಸೇರಿದಂತೆ ಕ್ಷೇತ್ರದ ಸ್ಥಳೀಯ ಸಮಸ್ಥೆಗಳಲ್ಲಿರುವ ಶಾಸಕರು ಬೆಂಬಲಿಗರು ತಮ್ಮ ಸ್ಥಾನಗಳಿಗೆ ಮತ್ತು ಪಕ್ಷದ ಕಾರ್ಯಕರ್ತರು ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ’ ಎಂದು ತಿಳಿಸಿದರು.

‘ನಮ್ಮ ಶಾಸಕರಿಗೆ ಆಗುತ್ತಿರುವ ಅವಮಾನ ನಮಗೆ ಸಹಿಕೊಳ್ಳಲು ಆಗುತ್ತಿಲ್ಲ. ಕಾಂಗ್ರೆಸ್ ಹೈಕಮಾಂಡ್ ಕೂಡಲೇ ಅವರಿಗೆ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸಬೇಕು. ಇಲ್ಲದಿದ್ದರೆ ಶಾಸಕರಿಗೆ ಸಹ ನಾವು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯ ಮಾಡುತ್ತೇವೆ’ ಎಂದರು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ, ಎಪಿಎಂಸಿ, ಟಿಎಪಿಸಿಎಂಎಸ್, ಪಿಎಲ್ಡಿ ಬ್ಯಾಂಕ್, ವಿವಿಧ ಗ್ರಾಮ ಪಂಚಾಯಿತಿಗಳ ಸದಸ್ಯರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.