ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿಗಳಿಗೆ ಸ್ಪರ್ಧಾ ಮನೋಭಾವ ಮುಖ್ಯ

ಅಗಲಗುರ್ಕಿ ಬಿಜಿಎಸ್ ಆಂಗ್ಲ ಶಾಲೆಯ ಜ್ಞಾನಗಂಗೋತ್ರಿ ಕ್ಯಾಂಪಸ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಪ್ರತಿಭಾನ್ವೇಷನೆ’ ಕಾರ್ಯಕ್ರಮ
Published : 8 ಡಿಸೆಂಬರ್ 2018, 13:09 IST
ಫಾಲೋ ಮಾಡಿ
Comments

ಚಿಕ್ಕಬಳ್ಳಾಪುರ: ‘ವಿದ್ಯಾರ್ಥಿಗಳು ಜೀವನದಲ್ಲಿ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳುವ ಜತೆಗೆ ಸೋಲು, ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಗುಣ ರೂಢಿಸಿಕೊಂಡರೆ ಖಂಡಿತ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದು ಆದಿಚುಂಚನಗಿರಿಯ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ತಿಳಿಸಿದರು.

ನಗರ ಹೊರವಲಯದ ಅಗಲಗುರ್ಕಿ ಬಿಜಿಎಸ್ ಆಂಗ್ಲ ಶಾಲೆಯ ಜ್ಞಾನಗಂಗೋತ್ರಿ ಕ್ಯಾಂಪಸ್‌ನಲ್ಲಿ ಶನಿವಾರ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಪ್ರತಿಭಾನ್ವೇಷನೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಜೀವನದ ಪ್ರತಿಯೊಂದು ಹಂತದಲ್ಲಿ ಸಿಗುವ ಅವಕಾಶ, ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಗುರಿ ಸಾಧಿಸುವ ಹಾದಿಯಲ್ಲಿ ಮುನ್ನಡೆಯಬೇಕು. ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ಜ್ಞಾನಾರ್ಜನೆಗೆ ಬಳಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಸಮಯ ಪರಿಪಾಲನೆ ಅತಿ ಮುಖ್ಯವಾದ್ದದ್ದು’ ಎಂದು ಅಭಿಪ್ರಾಯಪಟ್ಟರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್. ಜನಾರ್ಧನ್ ಮಾತನಾಡಿ, ‘ಪ್ರತಿಭೆ ಯಾರ ಆಸ್ತಿಯೂ ಅಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದು ಕಲೆ ಇರುತ್ತದೆ. ಶಿಕ್ಷಕರು ಅದನ್ನು ಹೊರತೆಗೆಯುವ ಕೆಲಸ ಮಾಡಬೇಕು. ಉತ್ತಮ ಕಾಲೇಜು ರೂಪಿಸಬೇಕಾದರೆ ಅದಕ್ಕೆ ಸುಸಜ್ಜಿತ ಕೊಠಡಿ, ಆಧುನಿಕ ಪಾಠೋಪಕರಣಗಳು, ಅಗತ್ಯ ಮೂಲಸೌಕರ್ಯಗಳು ಮತ್ತು ಉತ್ತಮ ಶಿಕ್ಷಕರು ಇರಲೇ ಬೇಕು’ ಎಂದು ಹೇಳಿದರು.

ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಎನ್. ಶಿವರಾಮರೆಡ್ಡಿ ಅವರು ವಿದ್ಯಾರ್ಥಿಗಳು ಹೇಗೆ ಓದಬೇಕು ಮತ್ತು ಪರೀಕ್ಷೆ ಸಮಯದಲ್ಲಿ ಓದಿರುವುದು ಹೇಗೆ ನೆನಪಿಡಬೇಕು ಮತ್ತು ಹೆಚ್ಚು ಅಂಕ ಗಳಿಸಲು ಹೇಗೆ ಓದಬೇಕು ಎನ್ನುವ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಶಾಲೆಯ ಪ್ರಾಂಶುಪಾಲ ಡಿ.ಸಿ. ಮೋಹನ್‌ಕುಮಾರ್, ಉಪ ಪ್ರಾಂಶುಪಾಲ ಚಂದ್ರಮೋಹನ್‍, ಜ್ಞಾನ ವೃಕ್ಷ ಅಕಾಡೆಮಿ ಪ್ರಾಂಶುಪಾಲ ನರೇಂದ್ರ, ಶಿಕ್ಷಕರಾದ ಅಶ್ವಥನಾರಾಯಣ, ಮಂಜುನಾಥ್, ಗಂಗಾಧರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT