ತರೀಕೆರೆ (ಚಿಕ್ಕಮಗಳೂರು): ತಾಲ್ಲೂಕಿನ ಸೀತಾಪುರ ಕಾವಲ್ ಗೇಟ್ ಬಳಿ ಬಸ್ಗಾಗಿ ಕಾಯುತ್ತಿದ್ದ ಶಾಲಾ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ ಹರಿದು ವಿದ್ಯಾರ್ಥಿನಿ ತುಳಸಿ (15) ಮೃತಪಟ್ಟಿದ್ದಾರೆ.

ಲಕ್ಕವಳ್ಳಿಯಿಂದ ತರೀಕೆರೆಗೆ ಬರುತ್ತಿದ್ದ ಬಸ್ ಚಾಲಕನ ನಿಯತ್ರಂಣ ತಪ್ಪಿ, ರಸ್ತೆ ಪಕ್ಕದಲ್ಲಿ ನಿಂತಿದ್ದ ವಿದ್ಯಾರ್ಥಿಗಳತ್ತ ನುಗ್ಗಿದೆ. ಗಂಭಿರವಾಗಿ ಗಾಯಗೂಂಡ ತುಳಸಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೊಬ್ಬ ವಿದ್ಯಾರ್ಥಿನಿ ನಿವೇದಿತಾ (14) ಬಸ್ನ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡರು. ಬಸ್ ಅನ್ನು ಹಿಂದಕ್ಕೆ ತಳ್ಳಿ ಸಾರ್ವಜನಿಕರು ಅವರನ್ನು ರಕ್ಷಿಸಿದರು. ನಿವೇದಿತಾ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳು ಬಾವಿಕೆರೆ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ವಿದ್ಯಾರ್ಥಿಗಳ ಮೇಲೆ ಹರಿದ ಬಸ್ ನಂತರ ರಸ್ತೆಯ ಬದಿಯ ಮನೆಯೊಂದರ ಚಾವಣಿ ಮತ್ತು ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದ 8 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಘಟನೆಯಿಂದ ರೂಚ್ಚಿಗೆದ್ದ ಸಾರ್ವಜನಿಕರು ಬಸ್ನ ಗಾಜು ಪುಡಿಗೂಳಿಸಿ ಆಕ್ರೋಶ ವ್ಯಕ್ತಪಡಿಸಿದರು. ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.