ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಗುರುವಾರ ಗುಡುಗು ಸಹಿತ ಧಾರಾಕಾರ ಮಳೆಯಾಯಿತು. ನಿಡುವಾಳೆಯ ಮುಖ್ಯ ರಸ್ತೆಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳೀಯರ ಸಹಕಾರದಿಂದ ಮರ ತೆರವುಗೊಳಿಸಲಾಯಿತು. ಬಿನ್ನಡಿ, ಬಣಕಲ್ ಮತ್ತಿತರ ಭಾಗದಲ್ಲಿ ವಿದ್ಯುತ್ ತಂತಿಯ ಮೇಲೆ ಬಿದ್ದ ಮರದ ಕೊಂಬೆಗಳನ್ನು ಮೆಸ್ಕಾಂ ಸಿಬ್ಬಂದಿ ತೆರವುಗೊಳಿಸಿದರು. ಹೇಮಾವತಿ ಹಾಗೂ ಉಪನದಿಗಳು ತುಂಬಿ ಹರಿಯುತ್ತಿವೆ. ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಮಂಜು ಮುಸುಕಿದ ವಾತಾವರಣ ಇದ್ದದ್ದರಿಂದ ವಾಹನಗಳು ನಿಧಾನವಾಗಿ ಚಲಿಸಿದವು. ಆಲೇಕಾನ್ ಜಲಪಾತ ಸೇರಿದಂತೆ ಚಾರ್ಮಾಡಿ ಘಾಟಿಯ ಹಲವು ಜಲಪಾತಗಳು ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.