ಮೂಡಿಗೆರೆ: ತಾಲ್ಲೂಕಿನಾದ್ಯಂತ ಸೋಮವಾರ ದಿನವಿಡೀ ಮಳೆ ಸುರಿಯಿತು. ಮಳೆಯಿಂದ ಕಾಫಿ ತೋಟಗಳಲ್ಲಿ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕಾರ್ಮಿಕರಿಗೆ ರಜೆ ನೀಡಲಾಗಿತ್ತು. ಕೋಗಿಲೆ ಗ್ರಾಮದಲ್ಲಿ ನಾಗೇಶ್ ಎಂಬುವವರ ಮನೆಯ ಹಿಂಭಾಗದಲ್ಲಿ ಗುಡ್ಡ ಕುಸಿದು, ಮಣ್ಣು ಜರಿದು ಮನೆಯ ಗೋಡೆಗೆ ಹಾನಿಯಾಗಿದೆ.

ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆ. ಹೊಸಳ್ಳಿ ಗ್ರಾಮದಲ್ಲಿ ರಸ್ತೆಗೆ ಮರ ಉರುಳಿದ್ದರಿಂದ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಜಾವಳಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಬಂದು ಮರ ತೆರವುಗೊಳಿಸಿದರು. ಅಗ್ರಹಾರದ ಸಮೀಪ ಹೇಮಾವತಿ ಉಪನದಿಗಳ ನೀರು ಗದ್ದೆಗೆ ನುಗ್ಗಿದ್ದರಿಂದ ಸಸಿಮಡಿಗಳಿಗೆ ಹಾನಿಯಾಗಿ ನಷ್ಟ ಉಂಟಾಗಿದೆ.

ಧಾರಾಕಾರ ಮಳೆಯಿಂದಾಗಿ ಹೇಮಾವತಿ ನದಿ ನೀರು ಬಂಕೇನಹಳ್ಳಿ, ಕಿತ್ತಲೆಗಂಡಿ, ಮುಗ್ರಹಳ್ಳಿ ಬಳಿ ರಭಸವಾಗಿ ಹರಿಯುತ್ತಿದೆ. ಚಿಕ್ಕಳ್ಳ, ದೊಡ್ಡಳ್ಳ, ಸುಣ್ಣದ ಹೊಳೆಗಳಲ್ಲೂ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.