ಚಿಕ್ಕಮಗಳೂರು: ಬಿಜೆಪಿ ಜಿಲ್ಲಾ ಘಟಕದಿಂದ ‘ನಮ್ಮ ಭೂಮಿ-ನಮ್ಮ ಹಕ್ಕು’ ಶೀರ್ಷಿಕೆಯಡಿ ನ.21 ಹಾಗೂ 22ರಂದು ಜನ ಜಾಗೃತಿ ಆಂದೋಲನವನ್ನು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಅಹೋರಾತ್ರಿ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ ಶೆಟ್ಟಿ ತಿಳಿಸಿದರು.

ರೈತರು ಮತ್ತು ಸಾರ್ವಜನಿಕರ ಪರವಾಗಿ ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನಗರ ಆಜಾದ್ ಪಾರ್ಕ್ ವೃತ್ತದಲ್ಲಿ ನ.21ರಂದು ಬೆಳಿಗ್ಗೆ 10 ಗಂಟೆಯಿಂದ 22ರ ಬೆಳಿಗ್ಗೆ 10 ಗಂಟೆಯ ತನಕ ನಿರಂತರ ಹೋರಾಟ ನಡೆಸಿ ರೈತರಿಂದ ಮನವಿ ಸ್ವೀಕರಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

‘ವಕ್ಫ್ ಆಸ್ತಿ ಸಂಬಂಧ ನಮ್ಮ ಜಿಲ್ಲೆಯಲ್ಲಿ ಸಮಸ್ಯೆ ಎದುರಾಗಿದ್ದು, ಈ ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸಲು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಚರ್ಚೆ ನಡೆಸಲಾಗಿದೆ. ಜನರನ್ನು ಸಂಪರ್ಕಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಿಜೆಪಿ ಜಿಲ್ಲಾ ಘಟಕದಿಂದ ಅಹೋರಾತ್ರಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ’ ಎಂದರು.

ಧರಣಿಯಲ್ಲಿ ಸ್ವಾಮೀಜಿಗಳು, ಮಠಾಧೀಶರು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಪಹಣಿಯಲ್ಲಿ ವಕ್ಫ್ ಎಂದು ಬದಲಾಗಿದ್ದರೆ ಮನವಿ ಸಲ್ಲಿಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಕದ ಉಪಾಧ್ಯಕ್ಷ ಕೋಟೆ ರಂಗಣ್ಣ, ವಕ್ತಾರ ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ, ನರೇಂದ್ರ, ಹಿರೇಮಗಳೂರು ಪುಟ್ಟಸ್ವಾಮಿ, ದಿನೇಶ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.