ಮೂಡಿಗೆರೆ: ಕೇಂದ್ರದ ಈ ಬಾರಿಯ ಬಜೆಟ್ ರಾಜ್ಯದ ಪಾಲಿಗೆ ನಿರಾಶಾದಾಯಕವಾಗಿದ್ದು ಕಾಫಿನಾಡಿನ ಜನರ ನಿರೀಕ್ಷೆ ಹುಸಿ ಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ.ಎಸ್.ಅನಂತ್ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 'ಮೋದಿ ಸರ್ಕಾರ 10 ವರ್ಷಗಳಿಂದ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡುತ್ತಾ ಬಂದಿದೆ. ನ್ಯಾಯಬದ್ಧವಾಗಿ ರಾಜ್ಯಕ್ಕೆ ಕೊಡಬೇಕಾಗಿದ್ದ ಅನುದಾನ ನೀಡದೆ ಅನ್ಯಾಯ ಮಾಡಿದೆ’ ಎಂದರು.

‘ಚಿಕ್ಕಮಗಳೂರು ಕಾಫಿ, ಅಡಿಕೆಯಂತಹ ವಾಣಿಜ್ಯ ಬೆಳೆಗೆ ಹೆಸರುವಾಸಿಯಾದ ಜಿಲ್ಲೆ. ಕಾಫಿ ಉದ್ಯಮದಿಂದ ಕೇಂದ್ರಕ್ಕೆ ಕೋಟ್ಯಂತರ ಮೊತ್ತದ ವಿದೇಶಿ ವಿನಿಮಯ ಬರುತ್ತಿದೆ. ಇಂತಹ ಉದ್ಯಮ ವಾಮಾನ ವೈಪರೀತ್ಯ, ಕಾರ್ಮಿಕರ ಕೊರತೆ, ಕೃಷಿ ಉಪಕರಣ ಮತ್ತು ಗೊಬ್ಬರದ ಬೆಲೆ ಏರಿಕೆಯಿಂದಾಗಿ ಸಂಕಷ್ಟದಲ್ಲಿದೆ. ಮೋದಿ ಸರ್ಕಾರ ಬೆಳೆಗಾರರಿಗೆ ಬಿಡಿಗಾಸನ್ನೂ ನೀಡದೆ ನಿರಾಸೆಗೊಳಿಸಿದೆ’ ಎಂದು ಅವರು ದೂರಿದರು.

‘ನಗರದ ರೈಲು ನಿಲ್ದಾಣ ಮೇಲ್ದರ್ಜೆಗೇರಿಸಲು ಬಜೆಟ್ನಲ್ಲಿ ವಿಶೇಷ ಅನುದಾನ ಮೀಸಲಿಟ್ಟಿಲ್ಲ. ಹೆಚ್ಚುವರಿ ರೈಲು ಸಂಚಾರಕ್ಕೂ ಕ್ರಮ ಕೈಗೊಂಡಿಲ್ಲ. ರಾಜ್ಯದವರೇ ಆದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ವಿಶೇಷ ಅನುದಾನ ಒದಗಿಸುವಲ್ಲಿ ವಿಫಲರಾಗಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ, ವಿಮಾನ ನಿಲ್ದಾಣದಂತಹ ಬೇಡಿಕೆಗೆ ಬಜೆಟ್ನಲ್ಲಿ ಯಾವ ಪ್ರಸ್ತಾಪವನ್ನೂ ಮಾಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೂ ಹೆಚ್ಚುವರಿ ಅನುದಾನ ಘೋಷಿಸಿಲ್ಲ’ ಎಂದು ಅವರು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.