ಚಿಕ್ಕಮಗಳೂರು: ವೈದ್ಯಕೀಯ ಸಹಿತ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿಇಟಿ) ಪಠ್ಯದ ಹೊರತಾಗಿ 45ಕ್ಕೂ ಅಧಿಕ ಪ್ರಶ್ನೆಗಳು ಬಂದಿವೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದು, ಹಿತಕಾಪಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕ್ರಮ ವಹಿಸಬೇಕು ಎಂದು ಕಾಲೇಜು ಆಡಳಿತ ಮಂಡಳಿಗಳ ಸಂಘದ ಚಿಕ್ಕಮಗಳೂರು ಘಟಕದ ಅಧ್ಯಕ್ಷ ಗ್ರೆಗರಿ ಲೋಬೊ ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿಯಾಗಬೇಕಿದ್ದ ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ಕೆ ಸಂಬಂಧಿಸಿಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಗೊಂದಲವಾಗಿದೆ. ಮುಂದಿನ ನೀಟ್ ಮತ್ತು ಜೆಇಇ ಪರೀಕ್ಷೆಯಲ್ಲಿಯೂ ವಿದ್ಯಾರ್ಥಿಗಳನ್ನು ಅಡ್ಡ ಕತ್ತರಿಯಲ್ಲಿ ಸಿಲುಕಿಸುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆ ನಡೆದು ಮೂರು ದಿನ ಕಳೆದರೂ ಸರ್ಕಾರ ಅಥವಾ ಕೆಇಎ ಈ ಬಗ್ಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ತ್ವರಿತವಾಗಿ ತಜ್ಞರ ಸಭೆ ಕರೆದು ಮುಂದಿನ ಕ್ರಮದ ಬಗ್ಗೆ ನಿರ್ಧಾರ ಪ್ರಕಟಿಸಬೇಕು. ಬಹುತೇಕ ವಿದ್ಯಾರ್ಥಿಗಳು ಸೂಕ್ಷ್ಮ ಸ್ವಭಾವದವರಾಗಿದ್ದು, ಮುಂದಿನ ಅನಾಹುತಗಳಿಗೆ ಸರ್ಕಾರ ಹಾಗೂ ಕೆಇಎ ನೇರ ಹೊಣೆಯಾಗಲಿದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.