ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು, ನ.9ರ ಬೆಳಿಗ್ಗೆ 6 ರಿಂದ ನ.11ರ ಬೆಳಿಗ್ಗೆ 6 ಗಂಟೆ ತನಕ ಮುಳ್ಳಯ್ಯನಗಿರಿ ಮತ್ತು ಬಾಬಾಬುಡನ್ಗಿರಿಗೆ ಇತರೆ ಪ್ರವಾಸಿಗರ ಭೇಟಿಯನ್ನು ನಿರ್ಭಂದಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ನ.10 ರಂದು ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರಲಿದ್ದಾರೆ. ವಾಹನಗಳ ಮೂಲಕ ತೆರಳಿ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಗೆ ಭೇಟಿ ನೀಡಲಿದ್ದಾರೆ. ರಸ್ತೆ ಕಿರಿದಾಗಿದ್ದು, ವಾಹನ ದಟ್ಟಣೆ ಹಾಗೂ ಹೆಚ್ಚಿನ ಜನಸಂದಣಿ ಉಂಟಾಗುವ ಸಾಧ್ಯತೆ ಇರುವುದರಿಂದ ಬೇರೆ ಪ್ರವಾಸಿಗರ ಭೇಟಿಯನ್ನು ನಿರ್ಭಂದಿಸಲಾಗಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಗಾಳಿಕೆರೆ ಮತ್ತು ಮಾಣಿಕ್ಯಧಾರಾ ತಾಣಗಳಿಗೆ ಪ್ರವೇಶ ಇರುವುದಿಲ್ಲ. ದತ್ತ ಮಾಲಾಧಾರಿಗಳು, ಶ್ರೀರಾಮ ಸೇನೆ ಮುಖಂಡರು, ಕಾರ್ಯಕರ್ತರು, ಸುತ್ತಮುತ್ತಲ ಸ್ಥಳೀಯರು, ಈಗಾಗಲೇ ಹೋಮ್ ಸ್ಟೆ ಮತ್ತು ರೆಸಾರ್ಟ್ಗಳಿಗೆ ಬುಕ್ಕಿಂಗ್ ಮಾಡಿದ್ದವರ ಪ್ರವೇಶಕ್ಕೆ ಅವಕಾಶ ಇದೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.