ಚಿಕ್ಕಮಗಳೂರು: ವಿಶ್ವಹಿಂದು ಪರಿಷತ್ ಮತ್ತು ಜರಂಗದಳದ ವತಿಯಿಂದ ಇದೇ 24ರಿಂದ ಮೂರು ದಿನ ನಡೆಯಲಿರುವ ದತ್ತ ಜಯಂತಿಯಲ್ಲಿ ಶಾಂತಿ–ಸೌಹಾರ್ದತೆ ಕಾಪಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಡಿ.24 ರಂದು ಅನುಸೂಯ ಜಯಂತಿ, 25 ರಂದು ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ, 26ರಂದು ಶ್ರೀಗುರು ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಮಾಡಲಿದ್ದಾರೆ.

30 ಸಾವಿರ ಭಕ್ತರು ಸೇರುವ ನಿರೀಕ್ಷೆ ಇದ್ದು, ಭದ್ರತೆಗೆ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಮುಳ್ಳಯ್ಯನಗಿರಿ ಮತ್ತು ಸುತ್ತಮುತ್ತಲ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ಬೇರೆ ಪ್ರವಾಸಿಗರು ದಿನಾಂಕ ಮುಂದೂಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಶೋಭಾಯಾತ್ರೆ, ಪಾದುಕೆ ದರ್ಶನದ ದಿನ ಹಲವು ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದ್ದು, ಪ್ರವಾಸಿಗರು ದಟ್ಟಣೆಯಲ್ಲಿ ಸಿಲುಕಿ ತೊಂದರೆ ಅನುಭವಿಸುವುದು ಬೇಡ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.