ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು | ಫುಡ್‌ ಕೋರ್ಟ್‌: ಹರಾಜಿಗೆ ಕಾದಿರುವ ಮಳಿಗೆ

ಕಾಮಗಾರಿ ಪೂರ್ಣಗೊಂಡರೂ ಸಾರ್ವಜನಿಕರಿಗೆ ಲಭ್ಯವಾಗದ ಯೋಜನೆ
Published : 24 ಅಕ್ಟೋಬರ್ 2024, 7:25 IST
Last Updated : 24 ಅಕ್ಟೋಬರ್ 2024, 7:25 IST
ಫಾಲೋ ಮಾಡಿ
Comments
ಹರಾಜು ಪ್ರಕ್ರಿಯೆ: ಜಿಲ್ಲಾಧಿಕಾರಿಗೆ ಪ್ರಸ್ತಾವನೆ
ಕಾಮಗಾರಿ ಪೂರ್ಣಗೊಂಡಿದ್ದು ಹರಾಜು ಪ್ರಕ್ರಿಯೆ ನಡೆಸಲು ಅನುಮೋದನೆ ಕೋರಿ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಸಭೆ ಆಯುಕ್ತ ಬಿ.ಸಿ.ಬಸವರಾಜು ತಿಳಿಸಿದರು. 46 ಮಳಿಗೆ ಆವರಣ ಶೌಚಾಲಯ ನೀರಿನ ವ್ಯವಸ್ಥೆ ಸೇರಿ ಎಲ್ಲಾ ಕಾಮಗಾರಿ ಪೂರ್ಣಗೊಂಡಿದೆ. ಜಿಲ್ಲಾಧಿಕಾರಿ ಅವರಿಂದ ಅನುಮೋದನೆ ದೊರೆತ ಕೂಡಲೇ ಹರಾಜು ಪ್ರಕ್ರಿಯೆ ನಡೆಸಲಾಗುವುದು. ಹರಾಜಿನಲ್ಲಿ ಭಾಗವಹಿಸಿದವರಿಗೆ ಮಳಿಗೆ ದೊರಕಲಿದ್ದು ಬಳಿಕ ಫುಡ್‌ ಕೋರ್ಟ್‌ ಉದ್ಘಾಟನೆಯಾಗಲಿದೆ ಎಂದು ಹೇಳಿದರು.
ವಾಜಿಪೇಯಿ ಸಂಕೀರ್ಣದ ಮಳಿಗೆ ಕೂಡ ಹರಾಜು
ಫುಡ್‌ ಕೋರ್ಟ್‌ ಕಾಮಗಾರಿ ಪೂರ್ಣಗೊಂಡಿದ್ದು ಹರಾಜು ಪ್ರಕ್ರಿಯೆ ಬಾಕಿ ಇದೆ. ಇದರ ಜೊತೆಗೆ ಎಂ.ಜಿ.ರಸ್ತೆಯಲ್ಲಿನ ವಾಜಿಪೇಯಿ ವಾಣಿಜ್ಯ ಸಂಕೀರ್ಣದಲ್ಲಿ ಖಾಲಿ ಇರುವ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನೂ ನಡೆಸಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ತಿಳಿಸಿದರು. ಎರಡು ಮೂರು ಬಾರಿ ಹರಾಜು ಪ್ರಕ್ರಿಯೆ ನಡೆಸಿದರೂ ವಾಜಿಪೇಯಿ ವಾಣಿಜ್ಯ ಸಂಕೀರ್ಣದಲ್ಲಿ ಹಿಂಭಾಗದ ಮಳಿಗೆ ಪಡೆಯಲು ಜನ ಆಸಕ್ತಿ ತೋರಿಸುತ್ತಿಲ್ಲ. ಆದ್ದರಿಂದ ಕಡಿಮೆ ಬಾಡಿಗೆ ನಿಗದಿ ಮಾಡಿ ಹರಾಜು ಪ್ರಕ್ರಿಯೆ ನಡೆಸಲಾಗುವುದು ಎಂದು ‘‍ಪ್ರಜಾವಾಣಿ’ಗೆ ಸ್ಪಷ್ಟಪಡಿಸಿದರು. ರಸ್ತೆ ಗುಂಡಿ ಮುಚ್ಚುವುದು ಹೊಸ ರಸ್ತೆಗಳ ನಿರ್ಮಾಣ ಫುಡ್‌ ಕೊರ್ಟ್‌ ಉದ್ಘಾಟನೆ ಸೇರಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಯೋಜನೆ ರೂಪಿಸಲಾಗಿದೆ. ಮಳೆ ಕಡಿಮೆಯಾದ ಕೂಡಲೇ ಎಲ್ಲವೂ ಸಾಕಾರಗೊಳ್ಳಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT