ಚಿಕ್ಕಮಗಳೂರು: ತಾಲ್ಲೂಕಿನ ಗಿರಿಶ್ರೇಣಿಯ ಕವಿಕಲ್‌ಗಂಡಿ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಹುಲ್ಲುಗಾವಲು, ಗಿಡಗಳು, ಪೊದೆಗಳು ಬೆಂಕಿಗೆ ಆಹುತಿಯಾಗಿವೆ.

ಇಳಿಜಾರಿನ ಭಾಗದಲ್ಲಿ ಬೆಂಕಿ ಅವರಿಸಿದೆ. ಅರಣ್ಯ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

‘ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬುಧವಾರ ಸಂಜೆಯೂ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿತ್ತು, ಕಾರ್ಯಾಚರಣೆ ನಡೆಸಿ ನಂದಿಸಲಾಗಿತ್ತು’ ಎಂದು ಉಪ ಅರಣ್ಯಸಂರಕ್ಷಣಾಧಿಕಾರಿ ಎನ್.ಇ.ಕ್ರಾಂತಿ ‘ಪ್ರಜಾವಾಣಿ’ಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಮೀಪ ಪವಿತ್ರ ವನದ ಬಳಿ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡು ಹುಲ್ಲು, ನೀಲಗಿರಿ ಸಸ್ಯ, ಎಲೆಗಳು ನಾಶವಾಗಿವೆ. ಅರಣ್ಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.