ನರಸಿಂಹರಾಜಪುರ: ‘ಕನ್ನಡ ಶ್ರೀಮಂತ ಭಾಷೆಯಾಗಿದ್ದು, ಕನ್ನಡಿಗರು ಹೃದಯ ಶ್ರೀಮಂತಿಕೆ ಬೆಳೆಸಿಕೊಂಡಿರುವುದರಿಂದ ಎಲ್ಲ ಭಾಷಿಕರಿಗೂ ನೆಲೆಕೊಟ್ಟಿದ್ದಾರೆ’ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಜೆ ಜೈ ಭುವನೇಶ್ವರಿ ಆಟೋ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.

ಆಟೊ ಚಾಲಕರು ತಮ್ಮ ಸೇವೆಯ ಜತೆಗೆ ಕನ್ನಡ ಉಳಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದರು.

ಭದ್ರಾಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಪಿ.ಅಂಶುಮಂತ್ ಮತನಾಡಿ, ‘ಆಟೊ ಚಾಲಕರು ಅಪದ್ಭಾಂವರಾಗಿ ಸಮಾಜಕ್ಕೆ ಕೊಡುಗೆ ನೀಡುತ್ತಿದ್ದಾರೆ’ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಮನಗರ ಲೋಕಾಯುಕ್ತ ಡಿಎಸ್ಪಿ ಎಸ್.ಸುಧೀರ್, ‘ಕನ್ನಡ ವೈಜ್ಞಾನಿಕವಾದ ತರ್ಕಬದ್ಧವಾದ ಭಾಷೆಯಾಗಿದೆ. ಆಟೊ ಚಾಲಕರು ರಕ್ತದಾನ ಶಿಬಿರ ಆಯೋಜಿಸಿ ಉತ್ತಮ ಕಾರ್ಯ ಮಾಡಿದ್ದಾರೆ’ ಎಂದರು.

ಸಿಂಹನಗದ್ದೆ ಬಸ್ತಿಮಠದ ಲಕ್ಷ್ಮೀಸೇನಾಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ‘ಆಟೊ ಚಾಲಕರು ವರ್ಷ ಪೂರ್ತಿ ಕನ್ನಡ ತೇರನ್ನು ಎಳೆಯುತ್ತಾರೆ’ ಎಂದರು.

ಜೈ ಭುವನೇಶ್ವರಿ ಆಟೋ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ.ಮಧುಸೂದನ್ ಅಧ್ಯಕ್ಷತೆ ವಹಿಸಿದ್ದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುರಯ್ಯಬಾನು, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಸದಸ್ಯೆ ಜುಬೇದಾ, ಮುಖಂಡಾರ ಆರ್.ಸದಾಶಿವ, ಪಿ.ಜೆ.ಅಂಟೋಣಿ, ಬಿ.ಎಸ್.ಆಶೀಶ್ ಕುಮಾರ್,ಪೂರ್ಣೇಶ್, ಅರುಣ್ ಕುಮಾರ್, ಎಂ.ಎನ್.ನಾಗೇಶ್, ಜಗದೀಶ್, ಚಂದ್ರಶೇಖರ್, ಕಣಿವೆವಿನಯ್,ವಕೀಲ ಜಿ.ದಿವಾಕರ್, ಗೂಡ್ಸ್ ಆಟೊ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್, ಆಟೊ ಸಂಘದ ಗೌರವ ಅಧ್ಯಕ್ಷ ಕೆ.ಅಣ್ಣಪ್ಪ, ನಂದಿನಿ ಆಲಂದೂರು, ಅಭಿನವ ಗಿರಿರಾಜ್ ಭಾಗವಹಿಸಿದ್ದರು. ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಡಾ.ನರಸಿಂಹಮೂರ್ತಿ ಅವರನ್ನು ಸನ್ಮಾನಿಸಲಾಯಿತು. ರಕ್ತದಾನಿಗಳಿಗೆ ಅಭಿನಂದನಾ ಪತ್ರ ನೀಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.