ಕೊಪ್ಪ: ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿನ ಬಲಮುರಿ ವೀರಗಣಪತಿ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫ್ರೆಂಡ್ಸ್ ಸರ್ಕಲ್ ಗೆಳೆಯರ ಬಳಗ ವತಿಯಿಂದ ಗುರುವಾರ ದುರ್ಗಾದೇವಿಯನ್ನು ಪ್ರತಿಷ್ಠಾಪಿಸಲಾಯಿತು. ಗಣಪತಿ ಹಬ್ಬದಂದು ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ಪಕ್ಕದಲ್ಲೇ ದುರ್ಗಾದೇವಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

ಬೆಳಿಗ್ಗೆ ಮೂಲ ವಿಗ್ರಹಕ್ಕೆ ವಿಶೇಷ ಪೂಜೆ ನೆರವೇರಿಸಲಾಯಿತು. ಭಕ್ತರು ಹಣ್ಣು ಕಾಯಿ ಪೂಜೆ ಸಲ್ಲಿಸಿ, ಸರತಿ ಸಾಲಿನಲ್ಲಿ ನಿಂತು ಪ್ರಸಾದ ಸ್ವೀಕರಿಸಿದರು. ನವರಾತ್ರಿ ಪ್ರಯುಕ್ತ ದೇವಸ್ಥಾನದ ಆವರಣದಲ್ಲಿ ತಳಿರು ತೋರಣ ಕಟ್ಟಿ, ವಿದ್ಯುತ್ ದೀಪದಿಂದ ಅಲಂಕಾರ ಮಾಡಲಾಗಿದೆ.

ನವರಾತ್ರಿಯಂದು ಪ್ರತಿದಿನ ದೇವಿಗೆ ವಿಶೇಷ ಅಲಂಕಾರ ಮಾಡಲಾಗುತ್ತದೆ. ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಗುರುವಾರ ಸಂಜೆ ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ತಂಡದಿಂದ ನೃತ್ಯ ಸಂಭ್ರಮ ನಡೆಯಿತು. ಶುಕ್ರವಾರ ಪುರುಷೋತ್ತಮ ಕೋಯಿಲ ಸಾರಥ್ಯದಲ್ಲಿ ತುಳು ನಾಟಕ ‘ಪಂಡ ಕೇನುಜೆರ್‘ ಆಯೋಜಿಸಲಾಗಿದೆ.

'ವಿಸರ್ಜನಾ ಮೆರವಣಿಗೆಯಲ್ಲಿ ಓಕುಳಿ, ಕೇರಳದ ತೆಯ್ಯಂ ನೃತ್ಯ ಪ್ರದರ್ಶನ, ಮಂಗಳವಾದ್ಯ, ಚಂಡೆ ವಾದ್ಯ, ನಾಸಿಕ್ ಬ್ಯಾಂಡ್, ವಿವಿಧ ವೇಷ, ಸಿಡಿಮದ್ದು ಪ್ರದರ್ಶನದೊಂದಿಗೆ ರಾಜಬೀದಿ ಉತ್ಸವ ಮೆರುಗು ನೀಡಲಿದೆ' ಎಂದು ಸೇವಾ ಸಮಿತಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.