ಚಿಕ್ಕಮಗಳೂರು: ಅತಿವೃಷ್ಠಿಯಿಂದ ಹಾನಿಯಾಗಿರುವ ರಸ್ತೆಗಳನ್ನು ದುರಸ್ತಿಪಡಿಸಿ ಜನರ ಓಡಾಟಕ್ಕೆ ಅನುಕೂಲ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.

ಅತಿವೃಷ್ಟಿಯಿಂದ ಆಗಿರುವ ಹಾನಿಗಳ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿದರು.

‘ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅನೇಕ ರಸ್ತೆಗಳು ಹಾಳಾಗಿವೆ. ದುರಸ್ತಿಗೆ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆ ಮಾಡಿದೆ. ಇವುಗಳ ದುರಸ್ತಿ ಕಾರ್ಯ ಗುಣಮಟ್ಟದಿಂದ ನಿರ್ವಹಿಸಿ ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಮಳೆ ಪ್ರಮಾಣ ಕಡಿಮೆಯಾದ ನಂತರ ಶಾಶ್ವತವಾಗಿ ರಸ್ತೆ ಕಾಮಗಾರಿ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ‘ಗುಡ್ಡೆತೋಟದ ಜನವಸತಿ ಇರುವ ಜಾಗ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ.ಜನರ ಸ್ಥಳಾಂತರಕ್ಕೆ 10 ಗುಂಟೆ ಜಾಗ ಗುರುತಿಸಲಾಗಿದೆ. ಅತಿ ಸೂಕ್ಷ್ಮ ಪ್ರದೇಶದಲ್ಲಿರುವ ನಿವಾಸಿಗಳನ್ನು ಸ್ಥಳಾಂತರಗೊಳಿಸಲು ಈಗಾಗಲೇ ಹಲವಾರು ಸಭೆ ಕರೆದು ಚರ್ಚಿಸಲಾಗಿದೆ. ಸ್ಥಳಾಂತರವಾಗಲು ಗ್ರಾಮಸ್ಥರು ನಿರಾಕರಿಸುತ್ತಿದ್ದಾರೆ. ಶೀಘ್ರವೇ ಅವರ ಮನವೊಲಿಸಿ ಸ್ಥಳಾಂತರಿಸಲಾಗುವುದು ಎಂದು ಹೇಳಿದರು.

2019ರ ಅತಿವೃಷ್ಠಿಯಿಂದ ಹಾನಿಯಾಗಿರುವ ಚನ್ನಹಡ್ಲು ಗ್ರಾಮದ ನಿರಾಶ್ರಿತರಿಗೆ ಪುನರ್ವಸತಿ ಯೋಜನೆಯಡಿ ಹಕ್ಕುಪತ್ರ ವಿತರಿಸಲಾಗಿದೆ. ಹಾನಿಯಾಗಿರುವ ಮನೆಗಳ ಕುರಿತು ಪರಿಶೀಲನೆ ನಡೆಸಿ ಫಲಾನುಭವಿಗಳಿಗೆ ಪರಿಹಾರ ಒದಗಿಸಲಾಗುವುದು. ರಸ್ತೆಗಳಿಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಮಳೆ ಪ್ರಮಾಣ ಇಳಿಕೆಯಾದ ನಂತರ ರಸ್ತೆ ಕಾಮಗಾರಿ ನಿರ್ವಹಿಸಲಾಗುವುದು ಎಂದರು.

ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ‘ರಸ್ಥೆ ದುರಸ್ತಿ ಕಾಮಗಾರಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಅದೇ ರೀತಿ ದುರಸ್ತಿ ಕಾರ್ಯ ಗುಣಮಟ್ಟದಿಂದ ಪೂರ್ಣಗೊಳಿಸಬೇಕು. ಮಳೆಯಿಂದ ಕಾಫಿ, ಅಡಕೆ ಹಾಗೂ ಕಾಳುಮೆಣಸು ಬೆಳೆ ನಾಶವಾಗಿದೆ. ರೈತರಿಗೆ ಪರಿಹಾರ ನೀಡಲು ಕ್ರಮವಹಿಸಬೇಕು’ ಎಂದರು.

ತರೀಕೆರೆ ಶಾಸಕ ಬಿ.ಎಚ್. ಶ್ರೀನಿವಾಸ್ ಮಾತನಾಡಿ, ‘ಭಾರಿ ಮಳೆಯಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಶೀಘ್ರವೇ ಪರಿಹಾರ ಒದಗಿಸಬೇಕು. ಅಜ್ಜಂಪುರ ಕೇತ್ರದಲ್ಲಿ ಅನೇಕ ರಸ್ತೆಗಳು ಹಾನಿಯಾಗಿವೆ. ಅವುಗಳ ಪೂರ್ಣ ದುರಸ್ತಿಗೆ ಅನುದಾನದ ಕೊರತೆಯಿದೆ. ವಿಶೇಷ ಅನುದಾನ ನೀಡಿ ರಸ್ತೆ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ಹೇಳಿದರು.

ಕಡೂರು ಶಾಸಕ ಕೆ.ಎಸ್. ಆನಂದ್ ಮಾತನಾಡಿ, ‘ಕಡೂರು ತಾಲ್ಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ 2 ಕೆರೆಗಳು ಅಪಾಯದಲ್ಲಿವೆ. ಪರಶೀಲನೆ ನಡೆಸಿ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ವಹಿಸಬೇಕು’ ಎಂದರು.

ಚಿಕ್ಕಮಗಳುರು ಶಾಸಕ ಎಚ್.ಡಿ ತಮ್ಮಯ್ಯ ಮಾತನಾಡಿ, ‘ಕೇತ್ರದಲ್ಲಿ ಹಾನಿಗೊಳಗಾದ ಮೂರು ಮನೆಗಳಿಗೆ ಇನ್ನು ಪರಿಹಾರ ನೀಡಿಲ್ಲ. ಅಧಿಕಾರಿಗಳು ಇವುಗಳನ್ನು ಪರಿಶೀಲಿಸಿ ಫಲಾನುಭವಿಗಳಿಗೆ ಪರಿಹಾರ ಒದಗಿಸಿ ಕೊಡಲು ಕ್ರಮ ವಹಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಚ್.ಎಸ್ ಕೀರ್ತನಾ, ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ, ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಕೃಷಿ ಉತ್ಪನ್ನ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್ ಹರೀಶ್, ಭದ್ರಾ ಕಾಡ ನಿಗಮದ ಅಧ್ಯಕ್ಷ ಕೆ.ಪಿ.ಅಂಶುಮಂತ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.