ಮೂಡಿಗೆರೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಲಾಯಿತು.

ಪಕ್ಷದ ಸಾಮಾಜಿಕ ಜಾಲಾತಾಣದ ಜಿಲ್ಲಾಧ್ಯಕ್ಷ ಶಿವ ಸಾಗರ್ ತೇಜಸ್ವಿ, ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ಹಂಚಿ, ಬಟ್ಟೆಗಳನ್ನು ವಿತರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವ ಸಾಗರ್ ತೇಜಸ್ವಿ, ‘ಪ್ರಿಯಾಂಕ್ ಖರ್ಗೆ ಅವರು ಸರಳ ಸಜ್ಜನ ರಾಜಕಾರಣಿಯಾಗಿದ್ದು, ಜನ್ಮದಿನ ಅದ್ಧೂರಿಯಾಗಿ ಆಚರಿಸಿಕೊಳ್ಳಲು ಇಷ್ಟಪಡುವುದಿಲ್ಲ. ತನ್ನ ಜನ್ಮದಿನ ಆಚರಿಸಲು ಇಚ್ಚಿಸುವವರು ಜನಪರ ಹಾಗೂ ಸಮಾಜಮುಖಿ ಕೆಲಸ ಮಾಡುವ ಜತೆಗೆ ಬಡ ವಿದ್ಯಾರ್ಥಿಗಳ ಸಮಸ್ಯೆಗೆ ನೆರವಾದರೆ ಅದಕ್ಕಿಂತ ದೊಡ್ಡ ಉಡುಗೊರೆ ಬೇಕಾಗಿಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ಮಲೆನಾಡಿನಲ್ಲಿ ಚಳಿ ಅಧಿಕವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಲಾಗಿದೆ’ ಎಂದು ಹೇಳಿದರು.

ಶಾಲೆಯ ಮುಖ್ಯ ಶಿಕ್ಷಕ ರಾಜೇಶ್, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.