ಚಿಕ್ಕಮಗಳೂರು: 'ಚಕ್ರವರ್ತಿ ಸೂಲಿಬೆಲೆ ಅಪ್ರತಿಮ ದೇಶಭಕ್ತ. ಅವರ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

'ಕಾಂಗ್ರೆಸ್ ಕಣ್ಣಿಗೆ ಚಕ್ರವರ್ತಿ ಸೂಲಿಬೆಲೆ ಅವರು ಬಿನ್ ಲಾಡೆನ್ ರೀತಿ ಕಾಣಿಸುತ್ತಿದ್ದಾರೆ. ಲಾಡೆನ್ ಬಂದರೂ ಒಳಗೆ ಬಿಡುತ್ತಾರೆ. ಚಕ್ರವರ್ತಿ ವಿಚಾರಗೋಷ್ಠಿ ರದ್ದುಪಡಿಸುತ್ತಾರೆ' ಎಂದು ಲೇವಡಿ ಮಾಡಿದರು.

ಸಂವಿಧಾನದ ಆಶೋತ್ತರಗಳನ್ನು ಬುಡಮೇಲು ಮಾಡಿದ್ದಕ್ಕೆ ಈ ಹಿಂದೆ ಕಾಂಗ್ರೆಸ್ಗೆ ದೇಶದ ಜನ ಬುದ್ಧಿ ಕಲಿಸಿದ್ದಾರೆ. ಈಗ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಹೇಳುವುದಿಲ್ಲ. ಅಧಿಕಾರದ ಮದವನ್ನು ತಲೆಗೇರಿಸಿಕೊಂಡಿದೆ. ಅದು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.