ಮೂಡಿಗೆರೆ: ‘ಮೂಡಿಗೆರೆ ಪಟ್ಟಣಕ್ಕೆ ಹೊಂದಿಕೊಂಡಿರುವ ಕೆಲವು ಗ್ರಾಮಗಳನ್ನು ಪಟ್ಟಣ ಪಂಚಾಯಿತಿಗೆ ಸೇರ್ಪಡೆ ಮಾಡಿಕೊಂಡು ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮಾರ್ಪಡಿಸುವ ಪ್ರಸ್ತಾವ ಸರ್ಕಾರದ ಮುಂದಿದೆ’ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದ ಬೇಲೂರು ರಸ್ತೆಯಲ್ಲಿ ಸೋಮವಾರ ಪಟ್ಟಣ ಪಂಚಾಯಿತಿಯ ಹಾಲಿ ಹಾಗೂ ಮಾಜಿ ಸದಸ್ಯರಿಗೆ ನೂತನ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಮಾತನಾಡಿ, ‘ಜನರ ಸೇವೆ ಮಾಡಲು ಕಚೇರಿ ಸ್ಥಾಪಿಸಿರುವುದು ಉತ್ತಮ ಬೆಳವಣಿಗೆ. ಇದರಿಂದ ಜನರಿಗೆ ಅನುಕೂಲವಾಗುತ್ತದೆ’ ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಬಿ. ಧರ್ಮಪಾಲ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಕೆ.ಸುಧೀರ್, ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರಾದೇವಿ ಸಿದ್ದಾರ್ಥ ಹಾಗೂ ಪಟ್ಟಣ ಪಂಚಾಯಿತಿಯ ಸದಸ್ಯರು ಹಾಗೂ ಮಾಜಿ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.