ಕಡೂರು: ‘ನರೇಗಾ ಯೋಜನೆಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗುವಂತೆ ಹೆಚ್ಚುವರಿ ಕ್ರಿಯಾಯೋಜನೆಗೆ ಅನುಮತಿ ದೊರಕಿಸಲು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುಂದಾಗಬೇಕು’ ಎಂದು ಸರಸ್ವತೀಪುರ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಕಂಸಾಗರ ಸೋಮಶೇಖರ್ ಹೇಳಿದರು.

ಕಡೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕ್ರಿಯಾ ಯೋಜನೆ ತಯಾರಿಸುವಾಗ ಒಟ್ಟು ಮೊತ್ತದ ಶೇ 60ರಷ್ಟು ಭಾಗ ವೈಯುಕ್ತಿಕ ಕಾರ್ಯಗಳಿಗೆ, ಶೇ20 ಅರಣ್ಯಕ್ಕೆ ಉಳಿದ ಶೇ20ರಷ್ಟನ್ನು ಸದಸ್ಯರಿಗೆ ನೀಡಲಾಗುತ್ತಿದೆ. ಒಂದು ಕೋಟಿ ವೆಚ್ಚದ ಕ್ರಿಯಾ ಯೋಜನೆ ತಯಾರಿಸಿದರೆ 10 ಸದಸ್ಯ ಬಲದ ಪಂಚಾಯಿತಿಯಲ್ಲಿ ಸದಸ್ಯರಿಗೆ ಕೇವಲ ತಲಾ ₹2 ಲಕ್ಷ ದೊರೆಯುತ್ತದೆ. ಇದರಲ್ಲಿ ಯಾವ ಚರಂಡಿ ಅಥವಾ ರಸ್ತೆ ಮಾಡಿಸಲು ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನರೇಗಾ ಯೋಜನೆಯಲ್ಲಿ ನಿರ್ಮಾಣವಾಗುವ ನಮ್ಮ ಹೊಲ- ನಮ್ಮ ರಸ್ತೆಗೆ ಡಾಂಬರೀಕರಣ ಮಾಡಲು ಅವಕಾಶ ಮಾಡಿಕೊಡಬೇಕು. 15ನೇ ಹಣಕಾಸು ಯೋಜನೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಬರುವ ಅನುದಾನ ಬಹು ಕಡಿಮೆ’ ಎಂದು ಅವರು ಹೇಳಿದರು.

ಪುರ ಗ್ರಾಮದ ಕೊನೆಮನೆ ರವಿ, ಬಿಸಿಲೇಹಳ್ಳಿ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಲಕ್ಷ್ಮೀಪುರ ಜಯಣ್ಣ, ಬ್ರಹ್ಮಸಮುದ್ರ ಕೀರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.