ಕಡೂರು: ಇಲ್ಲಿನ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ 2023-24ನೇ ಸಾಲಿನಲ್ಲಿ ₹76.14 ಲಕ್ಷ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷೆ ಪುಷ್ಪಲತಾ ಸೋಮೇಶ್ ಹೇಳಿದರು.

ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಬ್ಯಾಂಕ್ನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ವರ್ಷ ಬ್ಯಾಂಕ್ ₹2.87 ಕೋಟಿ ಸಾಲ ನೀಡಿದ್ದು, ಸಾಲ ವಸೂಲಾತಿಯಲ್ಲಿ ಶೇ 63.70ರಷ್ಟು ಪ್ರಗತಿಯಾಗಿದೆ. 2,465 ಸದಸ್ಯರಿಂದ ಪಿಗ್ಮಿ, ನಿಶ್ಚಿತ ಠೇವಣಿ, ಉಳಿತಾಯ ಖಾತೆ ಮುಂತಾದವುಗಳಿಂದ ₹658.92 ಲಕ್ಷ ಸಂಗ್ರಹಿಸಲಾಗಿದೆ ಎಂದರು.

2023-24ನೇ ವರ್ಷದ ಜಮಾ ಖರ್ಚು ವರದಿ ಮಂಡಿಸಲಾಯಿತು. ಉಪಾಧ್ಯಕ್ಷ ಎಚ್.ಎಸ್.ನಂಜುಂಡಪ್ಪ, ನಿರ್ದೇಶಕರಾದ ವಿರೂಪಾಕ್ಷಪ್ಪ, ಎಚ್.ಎಂ.ರೇವಣ್ಣಯ್ತ, ಎಂ.ಎನ್.ನಟರಾಜ್, ತಿಮ್ಮೇಗೌಡ, ಶ್ರೀನಿವಾಸಮೂರ್ತಿ, ಬ್ಯಾಂಕ್ ವ್ಯವಸ್ಥಾಪಕ ಸಿ.ಎಚ್.ಹನುಮಂತರಾಯ, ಲೆಕ್ಕಾಧಿಕಾರಿ ಶಿವಾಜಿ ಲಮಾಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.