ಮೂಡಿಗೆರೆ: 'ದೇಶದಲ್ಲಿ ಬೇಟಿ ಬಚಾವೋ ಎಂದು ಭಾಷಣ ಮಾಡುತ್ತಿದವರು" ಇಂದು ಎಲ್ಲಿ ಹೋಗಿದ್ದಾರೆ ಎಂದು ಎಸ್‍ಡಿಪಿಐ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರು ಅಂಗಡಿ ಪ್ರಶ್ನಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ಮೋದಿ ಅವರು ಈಗ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧ ತುಟಿ ಬಿಚ್ಚುತ್ತಿಲ್ಲ. ಇಲ್ಲಿನ ಪ್ರಕರಣಗಳ ಸಂಖ್ಯೆ ಗಮನಿಸಿದರೆ ಇದು ದೇಶದ ಅತಿ ಹಗರಣ ಎನ್ನುವುದರಲ್ಲಿ ಅನುಮಾನವಿಲ್ಲ. ಈ ನೀಚ ಕೃತ್ಯದಲ್ಲಿ ರೇವಣ್ಣ ಕೂಡ ಭಾಗಿಯಾಗಿರುವ ಆರೋಪವಿದೆ. ಈ ಪ್ರಕರಣದಲ್ಲಿ ಹಿಂದೂ ಮಹಿಳೆಯರಿಗೆ ಅನ್ಯಾಯವಾಗಿರುವ ಬಗ್ಗೆ ಬಿಜೆಪಿಯವರು ಖಂಡಿಸುತ್ತಿಲ್ಲ. ಮೋದಿ ಅವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹುಬ್ಬಳ್ಳಿಯ ನೇಹಾ ಪ್ರೇಮ ವೈಫಲ್ಯ ಕೊಲೆ ಪ್ರಕರಣವನ್ನು ಹಿಂದೂ ಮುಸ್ಲಿಂ ಹೆಸರಿನಲ್ಲಿ ರಾದ್ಧಾಂತ ಮಾಡುವ ಮೂಲಕ ಕೋಮು ದ್ವೇಷ ಹರಡುವ ಕೆಲಸ ಮಾಡಿರುವುದು ಸ್ಪಷ್ಟವಾಗಿದೆ. ಕೂಡಲೇ ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕು. ನೊಂದ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡಬೇಕು’ ಎಂದು ಒತ್ತಾಯಿಸಿದರು.

ಪಕ್ಷದ ತಾಲ್ಲೂಕು ಉಪಾಧ್ಯಕ್ಷ ಎಂ.ಯು ಷರಿಫ್ ಮಾತನಾಡಿ, ‘ಪಶ್ಚಿಮ ಬಂಗಾಳದಲ್ಲಿ ಇಂತಹದ್ದೇ ಘಟನೆಯಲ್ಲಿ ಆರೋಪಿ ಮುಸ್ಲಿಂ ಆಗಿದ್ದ ಎಂಬ ಕಾರಣಕ್ಕೆ ಮಾಧ್ಯಮಗಳು ಅರಚಾಡಿದ್ದವು. ಪ್ರಧಾನಿ ಮೋದಿ ಸಂತ್ರಸ್ತ ಮಹಿಳೆಯರನ್ನು ಖುದ್ದು ಭೇಟಿ ಮಾಡಿದ್ದರು. ಅವರಲ್ಲಿ ಒಬ್ಬ ಮಹಿಳೆಗೆ ಲೋಕಸಭಾ ಚುನಾವಣೆಗೆ ಟಿಕೆಟ್ ಸಹ ನೀಡಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗ ಈ ಪ್ರಕರಣದಲ್ಲಿ ಇನ್ನಿಲ್ಲದ ಆಸಕ್ತಿ ತೋರಿಸಿ ಕ್ರಮ ಕೈಗೊಂಡಿತ್ತು. ಆದರೆ ಈಗ ಇದ್ಯಾವುದೂ ಇಲ್ಲ. ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಈ ಪ್ರಕರಣದಲ್ಲಿ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ವ್ಯುಮೆನ್ ಇಂಡಿಯಾ ಮೂಮೆಂಟ್ ಸಂಘಟನೆಯ ನಜರತ್ ಭಾನು, ನಯೀಮ್, ಅಖ್ತರ್, ಎಸ್‍ಡಿಪಿಐ ಕಾರ್ಯದರ್ಶಿ ನಾಗೇಶ್ ಸಾಲುಮರ ಮುಖಂಡರಾದ ಜಾವೀದ್ ರಫೀಕ್, ಸಂತೋಷ್, ಮನ್ಸೂರ್ ಆಲ್ದೂರು ಇದ್ದರು.

Highlights - ಕೇಂದ್ರಸರ್ಕಾರದಿಂದ ಪ್ರಕರಣದಲ್ಲಿ ತಾರತಮ್ಯ ನೀತಿ ನೊಂದ ಮಹಿಳೆಯರಿಗೆ ನ್ಯಾಯ ಸಿಗಲಿ ಪ್ರಕರಣದಿಂದ ದೇಶಕ್ಕೆ ಅವಮಾನವಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.