ಕೊಟ್ಟಿಗೆಹಾರ (ಚಿಕ್ಕಮಗಳೂರು): ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನ ದುರ್ಗದ ಸಮೀಪ ಇರುವ ರಾಣಿಝರಿಗೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಬೆಂಗಳೂರಿನ ಭರತ್ (30) ಎಂಬುವವರ ಶವ ಶನಿವಾರ ಪತ್ತೆಯಾಗಿದೆ.

‘ರಾಣಿಝರಿ ಬಳಿ ಬೈಕ್ ನಿಲ್ಲಿಸಿ, ಬೆಟ್ಟ ಏರಿದ್ದ ಅವರು ಮೊಬೈಲ್ ಫೋನ್ ಹಾಗೂ ಚಪ್ಪಲಿಯನ್ನು ಅಲ್ಲೇ ಬಿಟ್ಟಿದ್ದರು. ಎಂಜಿನಿಯರ್ ಆಗಿದ್ದ ಅವರು ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಂಪನಿಯು ಮೂರು ತಿಂಗಳ ಸಂಬಳ ನೀಡಿ ಕೆಲಸದಿಂದ ತೆಗೆದು ಹಾಕಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು. ಬುಧವಾರ ಬೆಂಗಳೂರಿನಿಂದ ದುರ್ಗದ ಹಳ್ಳಿಗೆ ಬಂದಿದ್ದ ಭರತ್ ಅವರ ಮೊಬೈಲ್ ಫೋನ್ ನಾಟ್ ರೀಚಬಲ್ ಆಗಿದ್ದ ಕಾರಣ ಅವರ ಪೋಷಕರು ಬಾಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಾಣಿಝರಿಯ ಪ್ರಪಾತದಲ್ಲಿ ಅವರ ಶವ ಪತ್ತೆಯಾಗಿದೆ. ಬಾಳೂರು ಪೊಲೀಸರು, ಸಮಾಜ ಸೇವಕರು, ಸ್ಥಳೀಯರು ಕಾರ್ಯಾಚರಣೆ ನಡೆಸಿ ಶವವನ್ನು ಮೇಲಕ್ಕೆತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.