ನರಸಿಂಹರಾಜಪುರ: ‘ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ’ ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಲ್.ಎಂ.ದರ್ಶನಾಥ ಹೇಳಿದರು.

ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯ ಆಶ್ರಯದಲ್ಲಿ ಶನಿವಾರ ಗುಬ್ಬಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಬ್ಬಿಗಾ, ಈಚಿಕೆರೆ, ಸುತ್ತ, ವಗಡೆಯಲ್ಲಿ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಉತ್ಪನ್ನ ವಶ ಪಡಿಸಿಕೊಂಡ ಬಳಿಕ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಎ.ಎಸ್.ಐ. ಶ್ರೀಧರ್ ಮಾತನಾಡಿ, ‘ಅಂಗಡಿಗಳ ಮುಂದೆ ಧೂಮಪಾನ ನಿಷೇಧಿಸಿದೆ ಹಾಗೂ 18 ವರ್ಷ ವಯಸ್ಸಿನೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದಿಲ್ಲ ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಬೇಕು ಎಂದು ಸೂಚಿಸಿದರು. ಅಲ್ಲದೆ ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಪ್ರದರ್ಶಿಸುವುದು, ಸೇವಿಸಲು ಉತ್ತೇಜನ ನೀಡುವುದು, ಶಾಲೆಯ 100 ಮೀ. ಅಂತರದಲ್ಲಿ ಮಾರಾಟ ಮಾಡುವುದು, ಕಾನೂನು ಬಾಹಿರವಾಗಿದೆ ಎಂದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕ ಗಣೇಶ್ ಓಲೆಕಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆರ್. ಕೇಶವಮೂರ್ತಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹೂವಮ್ಮ, ಬಿಲ್ ಕಲೆಕ್ಟರ್ ಜಗದೀಶ್, ಸಮುದಾಯ ಆರೋಗ್ಯ ಅಧಿಕಾರಿ ಶಿಲ್ಪ, ಆಶಾ ಕಾರ್ಯಕರ್ತೆ ರಜನಿ ಇದ್ದರು. ಅಂಗಡಿ, ಹೋಟೆಲ್ ಸೇರಿದಂತೆ 6 ಪ್ರಕರಣ ದಾಖಲಿಸಿಕೊಂಡು ₹2,100 ದಂಡ ವಸೂಲಿ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.