ಬೀರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಕ್ಕಣೆ ಮಾಡುತ್ತಿರುವ ರೈತರು
ಸೂಚನಾ ಫಲಕ ಇಲ್ಲದೆ ಸವಾರರು ಗೊಂದಲ
ಈ ಹೆದ್ದಾರಿಯಲ್ಲಿ ಹಲವು ಕಡೆಗಳಲ್ಲಿ ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿ ನಡೆಯುತ್ತಿದೆ. ಏಕಾಏಕಿ ತಿರುವುಗಳನ್ನು ಪಡೆಯಬೇಕಿದೆ. ಎತ್ತ ಸಾಗಬೇಕು ಎಂಬುದು ಗೊತ್ತಾಗದೆ ವಾಹನ ಸವಾರರು ಪರದಾಡುವಂತಾಗಿದೆ.
ಬೀರೂರಿನಿಂದ ತರೀಕೆರೆ ಮಾರ್ಗದಲ್ಲಿ ಶಿವಮೊಗ್ಗ ಕಡೆಗೆ ತೆರಳಬೇಕಾದ ವಾಹನ ಸವಾರರು ಹೊಸ ಹೆದ್ದಾರಿ ನಿರ್ಮಾಣವಾಗುತ್ತಿರುವ ಕಡೆಗಳಲ್ಲಿ ಗೊಂದಲಕ್ಕೆ ಈಡಾಗುತ್ತಿದ್ದಾರೆ. ಹೊಸ ರಸ್ತೆ ಪೂರ್ಣ ಆಗಿರಬಹುದು ಎಂದು ಮುಂದೆ ಸಾಗಿ ವಾಪಸ್ ಬರಬೇಕಾದ ಸ್ಥಿತಿ ಇದೆ.
ಸೂಚನಾ ಫಲಕ ಇದ್ದಿದ್ದರೆ ವಾಹನ ಸವಾರರು ಪರದಾಡುವ ಸ್ಥಿತಿ ಇರುವುದಿಲ್ಲ. ರಾತ್ರಿ ವೇಳೆಯಂತೂ ಈ ಮಾರ್ಗದಲ್ಲಿ ಹೊಸದಾಗಿ ಬರುವ ಚಾಲಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಬಗ್ಗೆ ಗಮನ ಹರಿಸಬೇಕು ಎಂಬುದು ಸ್ಥಳೀಯರ ಒತ್ತಾಯ.