ಚಿಕ್ಕಮಗಳೂರು: ‘ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಮನಸ್ಸಿಗೆ ಮೊಳೆ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಅದು ಅವರಿಗೆ ಶ್ರೇಯಸ್ಕರವಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದ ಮನೆಗಳ ಮುಂದೆ ಮಾರ್ಕ್ ಹಾಕಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಎಲ್ಲಿ, ಯಾರ ಮನೆಗೆ ಮೊಳೆ ಹೊಡೆಯಲಾಗಿದೆ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಹೇಳಿಕೆ ಅವರ ಸ್ಥಾನ, ಘನತೆ, ಕುಟುಂಬಕ್ಕೆ ಗೌರವ ತರುವ ಸಂಗತಿಯಲ್ಲ. ಆತ್ಮವಂಚನೆಯಿಂದ ಮಾತನಾಡುವುದು ದುರದೃಷ್ಟಕರ’ ಎಂದು ಕುಟುಕಿದರು.

ಇದನ್ನೂ ಓದಿ.. ರಾಮ ಮಂದಿರಕ್ಕೆ ಹಣ ಕೊಡದವರ ಮನೆಗಳ ಗುರುತು: ಎಚ್‌ಡಿಕೆ ಆತಂಕ

‘ಜನರು ಸ್ವಯಂಪ್ರೇರಿತವಾಗಿ ರಾಮಮಂದಿರಕ್ಕೆ ಹಣ ನೀಡುತ್ತಿದ್ದಾರೆ. ಗುರಿ ಇದ್ದದ್ದು ₹ 1,000 ಕೋಟಿ, ಈಗಾಗಲೇ 1511 ಕೋಟಿಗೂ ಅಧಿಕ ಸಂಗ್ರಹವಾಗಿದೆ. ಇನ್ನೂ ₹ 500 ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹವಾಗುವ ನಿರೀಕ್ಷೆ ಇದೆ. ಭಕ್ತಿಯಿಂದ ಕೊಡುವ ದೇಣಿಗೆ ಬೇಕೇ ಹೊರತು, ದಬಾಯಿಸಿ ತೆಗೆದುಕೊಳ್ಳುವ ಅಗತ್ಯ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.