ಚಿತ್ರದುರ್ಗ: ವೇಗವಾಗಿ ಬಂದ ಲಾರಿಯೊಂದು ರಸ್ತೆಯಲ್ಲಿ ಸಾಗುತ್ತಿದ್ದ ಕುರಿ ಹಿಂಡಿನ ಮೇಲೆ ಹರಿದ ಪರಿಣಾಮ 30 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಭವಿಸಿದೆ.

ಅಪಘಾತದಲ್ಲಿ ಸತ್ತ ಕುರಿಗಳು ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಸಮೀಪದ ಅಮೃತಾಪುರ ಗ್ರಾಮದ ಶಿವಣ್ಣ ಎಂಬುವರಿಗೆ ಸೇರಿವೆ. ಕುರಿಗಳನ್ನು ಮೇಯಿಸಿಕೊಂಡು ಜಾನುಕೊಂಡದ ಬಳಿ ಇರುವ ರೊಪ್ಪಕ್ಕೆ ತೆರಳುತ್ತಿದ್ದಾಗ ಘ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇರುವ ನಮಸ್ತೆ ಹೋಟೆಲ್ ಬಳಿ ಘಟನೆ ನಡೆದಿದೆ. ಚಿತ್ರದುರ್ಗದ ಕಡೆಯಿಂದ ವೇಗವಾಗಿ ಬಂದ ಲಾರಿ ಕುರಿ ಮಂದೆ ಮೇಲೆ ಏಕಾ ಏಕಿಯಾಗಿ ನುಗ್ಗಿದೆ.

ಚಾಲಕನು ಕುಡಿದ ಮತ್ತಿನಲ್ಲಿ ಲಾರಿ ಚಾಲನೆ ಮಾಡುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಜಿಲ್ಲಾ ಕುರಿ ಮತ್ತು ಉಣ್ಣೆ ನಿಗಮದ ಅಭಿವೃದ್ಧಿ ಅಧಿಕಾರಿ ತಿಪ್ಪೇಸ್ವಾಮಿ ಹಾಗೂ ಹೊಳಲ್ಕೆರೆ ತಾಲ್ಲೂಕು ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರಂಗಸ್ವಾಮಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆದರು. ಕುರಿ ಮಾಲೀಕರಿಗೆ ಅಂದಾಜು ₹ 5 ಲಕ್ಷ ನಷ್ಟ ಸಂಭವಿಸಿದೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.