ಚಳ್ಳಕೆರೆ: ‘ಸುಪ್ರೀಂ ಕೋರ್ಟ್ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆ ಕಾಯಂಗೊಳಿಸಬೇಕು’ ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಗುರುವಾರ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಇಂದಿರಮ್ಮ, ‘ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.

‘ಸಹಾಯಕಿಯರ ಸಂಭಾವನೆ, ಮನೆಬಾಡಿಗೆ, ಟಿಎ, ಡಿಎ, ಸಮವಸ್ತ್ರ ವಿತರಿಸಬೇಕು’ ಎಂದು ಪ್ರಧಾನ ಕಾರ್ಯದರ್ಶಿ ಬಿ.ಬೋರಮ್ಮ ಮನವಿ ಮಾಡಿದರು.

ಖಜಾಂಚಿ ಜಿ.ಎನ್.ಗಂಗಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.