ಚಿತ್ರದುರ್ಗ: ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಮಟ್ಟದ ಸಮಾವೇಶವನ್ನು ನಗರದ ಚಂದ್ರವಳ್ಳಿ ಆಟದ ಮೈದಾನದಲ್ಲಿ ಫೆ.25ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ. 15 ಸಾವಿರ ಮಹಿಳೆಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ. ಮುರುಳಿ ತಿಳಿಸಿದರು.

‘ಸರ್ಕಾರದ ಯೋಜನೆಯ ಬಗ್ಗೆ ಮಾಹಿತಿ ನೀಡಲು ಹಾಗೂ ಪಕ್ಷದ ಸಾಧನೆಯನ್ನು ತಿಳಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದ ಮಹಿಳಾ ಫಲಾನುಭವಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಜಿಲ್ಲೆಯಲ್ಲಿ ಪಕ್ಷದ 9 ಮಂಡಲಗಳಿದ್ದು, ಈ ಎಲ್ಲ ಮಂಡಲದಿಂದ ಮಹಿಳೆಯರು ಆಗಮಿಸಲಿ
ದ್ದಾರೆ. ರಾಷ್ಟ್ರೀಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವಿಜಯಲಕ್ಷ್ಮಿ, ನಟಿ ತಾರಾ ಅನುರಾಧ, ಬಿಜೆಪಿ ಮೋರ್ಚಾ ಸಮಾವೇಶದ ಸಂಚಾಲಕ ಬಿ.ವೈ.ವಿಜಯೇಂದ್ರ, ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ಗೀತಾ ವಿವೇಕಾನಂದ ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ಮಹಿಳೆಯರಿಗೆ ಅನೇಕ ಯೋಜನೆಗಳನ್ನು ನೀಡಿವೆ. ಬಜೆಟ್ನಲ್ಲಿ ಘೋಷಿಸಿರುವಂತೆ ಎಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಈ ಮಾಹಿತಿಯನ್ನು ಮಹಿಳಾ ಮತದಾರರಿಗೆ ತಲುಪಿಸಬೇಕಿದೆ. ಕಾಂಗ್ರೆಸ್ನ ಹುಸಿ ಭರವಸೆಗಳ ಬಗ್ಗೆಯೂ ಅರಿವು ಮೂಡಿಸಬೇಕಿದೆ. ಹೀಗಾಗಿ, ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದರು.

‘ಚುನಾವಣಾ ಪ್ರಣಾಳಿಕೆಯ ಮೂಲಕ ಹುಸಿ ಆಶ್ವಾಸನೆಗಳನ್ನು ಕಾಂಗ್ರೆಸ್ ನೀಡುತ್ತಿದೆ. ಇಂತಹ ಸುಳ್ಳು ಆಶ್ವಾಸನೆಯನ್ನು ಬಿಜೆಪಿ ನೀಡುವುದಿಲ್ಲ. ಮಹಿಳಾ ಕಾರ್ಮಿಕರು, ಆಶಾ ಕಾರ್ಯಕರ್ತೆಯರ ಸಹಾಯಧನ ಏರಿಕೆ ಮಾಡಲಾಗಿದೆ. ಸಾಲ ಸೌಲಭ್ಯ ಸೇರಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ’ ಎಂದು ವಿವರಿಸಿದರು.

‘ಮಾರ್ಚ್ ತಿಂಗಳಲ್ಲಿ ಬಿಜೆಪಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಾರ್ಚ್ 4ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ರಾಷ್ಟ್ರಮಟ್ಟದ ಗಣ್ಯರು ಭೇಟಿ ನೀಡುವ ಸಾಧ್ಯತೆ ಇದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೈಲಜಾ ರೆಡ್ಡಿ, ಉಪಾಧ್ಯಕ್ಷೆ ಚಂದ್ರಿಕಾ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ, ಮುಖಂಡರಾದ ಡಾ.ಸಿದ್ದಾರ್ಥ ಗುಂಡಾರ್ಪಿ, ನಾಗರಾಜ ಬೇದ್ರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.