ಚಿತ್ರದುರ್ಗ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಗುರುವಾರ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪಕ್ಷದ ಮುಖಂಡರು ಜಯಘೋಷ ಕೂಗಿ ಪರಸ್ಪರ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ‘ಉತ್ತರಪ್ರದೇಶ, ಮಣಿಪುರ, ಗೋವಾ, ಉತ್ತರಾಖಂಡದ ಫಲಿತಾಂಶದಿಂದ ಬಿಜೆಪಿಗೆ ಇನ್ನೂ ಹೆಚ್ಚಿನ ಹುರುಪು ಬಂದಂತಾಗಿದೆ. ಮತದಾರರು ಮೋದಿ ಸರ್ಕಾರವನ್ನು ಬೆಂಬಲಿಸಿರುವುದನ್ನು ನೋಡಿದರೆ ಹತ್ತಾರು ವರ್ಷ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರ ನಡೆಸಲಿದೆ. ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸೀಟುಗಳನ್ನು ಗೆಲ್ಲುವುದರಲ್ಲಿ ಅನುಮಾನವಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಭಾಗೀಯ ಸಂಘಟನಾ ಕಾರ್ಯದರ್ಶಿ ಜೇಷ್ಠ ಪಡಿವಾಳ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ. ಮುರಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಹೊನ್ನಾಳ್, ಖಜಾಂಚಿ ಮಾಧುರಿ ಗಿರೀಶ್, ನಗರ ಘಟಕದ ಅಧ್ಯಕ್ಷ ನವೀನ್ ಚಾಲುಕ್ಯ, ಸಂಪತ್ ಕುಮಾರ್, ಮಲ್ಲಿಕಾರ್ಜುನ್, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ ಅವರೂ ಈ ಸಂದರ್ಭದಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.