ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ: ಪ್ರಥಮ ಪ್ರಶ್ನೆಯಲ್ಲೇ ಗಮನ ಸೆಳೆದ ಸಂಸದರು

Published 22 ಜುಲೈ 2024, 15:48 IST
Last Updated 22 ಜುಲೈ 2024, 15:48 IST
ಅಕ್ಷರ ಗಾತ್ರ

ಚಿತ್ರದುರ್ಗ: ಗೋವಿಂದ ಕಾರಜೋಳ ಅವರು ಸಂಸದರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿ ಲೋಕಸಭೆಯಲ್ಲಿ ಸೋಮವಾರ ಪ್ರಥಮ ಪ್ರಶ್ನೆ ಕೇಳಿದರು. ಇದು 18ನೇ ಲೋಕಸಭಾ ಅಧಿವೇಶನದ ಪ್ರಥಮ ಕಲಾಪದ ಪ್ರಥಮ ಪ್ರಶ್ನೆಯೂ ಆಗಿದ್ದು ವಿಶೇಷವಾಗಿತ್ತು.

ಸ್ಪೀಕರ್‌ ಓಂ ಬಿರ್ಲಾ ಅವರು ಗೋವಿಂದ ಕಾರಜೋಳ ಅವರ ಹೆಸರು ಘೋಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ‘ಕಳೆದ ಐದು ವರ್ಷಗಳ ಅವಧಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಸ್ಥಾಪನೆಯಾದ ಕೇಂದ್ರೀಯ ವಿದ್ಯಾಲಯಗಳ ಸಂಖ್ಯೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕುಂಚಿಗನಲ್‌ನಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪನೆಯ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆದಿಯೇ, ಈ ಭಾಗದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಯ ವಿಳಂಬಕ್ಕೆ ಕಾರಣಗಳೇನು’ ಎಂಬ ಪ್ರಶ್ನೆ ಕೇಳಿದರು.

‘ಚಿತ್ರದುರ್ಗ ಲೋಕಸಭಾ ಕ್ಷೇತ್ರ ದೇಶದಲ್ಲೇ ಹಿಂದುಳಿದಿದೆ. ಪರಿಶಿಷ್ಟ ಜಾತಿ, ಪಂಗಡಗಳ ಹೆಚ್ಚು ಜನರು ಇಲ್ಲಿ ವಾಸಿಸುತ್ತಿದ್ದಾರೆ. ಕಾಡುಗೊಲ್ಲ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಈ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭಕ್ಕೆ ತ್ವರಿತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT