ಚಿತ್ರದುರ್ಗ: ನಗರಸಭೆ ಅಧ್ಯಕ್ಷ–ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ನಾಲ್ವರು ಸದಸ್ಯರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳವರೆಗೆ ಉಚ್ಛಾಟನೆಗೊಳಿಸಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ ಸೋಮವಾರ ಆದೇಶಿಸಿದ್ದಾರೆ.

ಬಿಜೆಪಿ ಬೆಂಬಲಿತರಾಗಿ ಆಯ್ಕೆಯಾಗಿದ್ದ 1ನೇ ವಾರ್ಡ್ ಸದಸ್ಯೆ ನಾಗಮ್ಮ, 17ನೇ ವಾರ್ಡ್ ಸದಸ್ಯ ಜಯಪ್ಪ, 30ನೇ ವಾರ್ಡ್ ಸದಸ್ಯ ಮಂಜಣ್ಣ ಹಾಗೂ 33ನೇ ವಾರ್ಡ್ ಸದಸ್ಯೆ ಶ್ರೀದೇವಿ ಚಕ್ರವರ್ತಿ ಅವರು ಉಚ್ಛಾಟನೆಗೊಂಡವರು.

‘ಪಕ್ಷದ ಶಿಸ್ತು ಉಲ್ಲಂಘನೆ ಮಾಡಿರುವ ಸದಸ್ಯರು ಮುಖಂಡರಿಗೆ ಮುಜುಗರ ಉಂಟುಮಾಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಉಚ್ಛಾಟನೆ ಮಾಡಲಾಗಿದೆ’ ಎಂದು ಎ. ಮುರಳಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.