ಚಿತ್ರದುರ್ಗ: ತಾಲ್ಲೂಕಿನ ಬ್ಯಾಲಹಾಳು ಗ್ರಾಮದಲ್ಲಿ ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದಡಿ ಬಂಧಿತರಾದ ಹತ್ತು ಆರೋಪಿಗಳಲ್ಲಿ ಒಬ್ಬರಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಚಿಕಿತ್ಸೆಗಾಗಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಡೆಯುತ್ತಿದ್ದ ಮದುವೆ ಮನೆಗೆ ತೆರಳಿದ್ದ ಪೊಲೀಸರ ವಾಹನದ ಮೇಲೆ ಶನಿವಾರ ರಾತ್ರಿ ಕಲ್ಲುತೂರಾಟ ನಡೆದಿತ್ತು. ಈ ಸಂಬಂಧ ಭರಮಸಾಗರ ಠಾಣೆಯ ಪೊಲೀಸರು ವರನ ಸಹೋದರ ಸೇರಿ ಹತ್ತು ಜನರನ್ನು ಭಾನುವಾರ ಬಂಧಿಸಿದ್ದರು.

‘ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸುವುದುಕ್ಕೂ ಮೊದಲು ಕೋವಿಡ್ ಪರೀಕ್ಷೆ ನಡೆಸುವುದು ಕಡ್ಡಾಯ. ಪರೀಕ್ಷೆಯಲ್ಲಿ ಒಬ್ಬ ಆರೋಪಿಗೆ ಕೋವಿಡ್ ಇರುವುದು ಖಚಿತವಾಗಿದೆ. ಉಳಿದ 9 ಆರೋಪಿಗಳ ವರದಿಗಳು ನೆಗೆಟಿವ್ ಬಂದಿದ್ದು, ಇವರನ್ನು ಮಾತ್ರ ಜೈಲಿಗೆ ಕಳುಹಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.