ಚಿತ್ರದುರ್ಗ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಪ್ರಕರಣಗಳಲ್ಲಿ ಸಂಬಂದಪಟ್ಟವರ ಮೇಲೆ ಎಫ್ಐಆರ್ ದಾಖಲಿಸದೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

‘ದೂರು ಆಧರಿಸಿ ಬಾಲ್ಯ ವಿವಾಹದ ವಿರುದ್ದ ಕ್ರಮ ಕೈಗೊಳ್ಳಬೇಕು. ಹೆಚ್ಚಿನ ಪ್ರಚಾರದ ಮೂಲಕ ಜಾಗೃತಿ ಮೂಡಿಸಬೇಕು’ ಎಂದರು.

‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಕಿ ಅಂಶಗಳ ಜುಲೈಯಿಂದ ಸೆಪ್ಟೆಂಬರ್ವರೆಗೆ 18 ಬಾಲ್ಯ ವಿವಾಹ ಪ್ರಕರಣ ದಾಖಲಾಗಿವೆ. ಆದರೆ ಆರೋಗ್ಯ ಇಲಾಖೆಯ ಆರ್ಸಿಎಚ್ ತಂತ್ರಾಂಶದಲ್ಲಿ ಏಪ್ರಿಲ್ನಿಂದ ಅಕ್ಟೋಬರ್ವರೆಗೆ 194 ಬಾಲ ಗರ್ಭಿಣಿ ಪ್ರಕರಣ ಬೆಳಕಿಗೆ ಬಂದಿವೆ. ಬಾಲ್ಯ ವಿವಾಹ ತಡೆಯುವಲ್ಲಿ ವಿಫಲವಾಗಿರುವ ಕಾರಣದಿಂದಲೇ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿವೆ’ ಎಂದು ಬೇಸರಿಸಿದರು.

‘ಪ್ರತಿ ತಿಂಗಳು ಶಾಲೆಗಳಲ್ಲಿ 7 ಕ್ಕಿಂತ ಹೆಚ್ಚು ದಿನ ಗೈರಾದ ಮಕ್ಕಳ ವಿವರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಶಿಕ್ಷಣ ಇಲಾಖೆ ನೀಡಬೇಕು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು’ ಎಂದು ತಿಳಿಸಿದರು.

‘ಸಖಿ ಕೇಂದ್ರದಲ್ಲಿ ಸೆಪ್ಟಂಬರ್ವರೆಗೆ 7 ಕೌಟುಂಬಿಕ ಕಲಹ, 4ಅತ್ಯಾಚಾರ, 22 ಪೊಕ್ಸೋ, 15 ಕಾಣೆ, 14 ಇತರೆ ಸೇರಿ 62 ಪ್ರಕರಣಗಳು ದಾಖಲಾಗಿವೆ. ಸಂಕಷ್ಟದಲ್ಲಿರುವ ಮಹಿಳೆಯರಿಗೆ ನೆರವು ನೀಡಲಾಗಿದೆ’ ಎಂದು ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದರು.

‘ಜಿಲ್ಲೆಗೆ ಹೊಸದಾಗಿ ಸರ್ಕಾರಿ ವಿಶೇಷ ದತ್ತು ಕೇಂದ್ರ ಮಂಜೂರು ಆಗಿದೆ. ಪ್ರಸ್ತುತ ಬಾಲಕಿಯರ ಬಾಲ ಮಂದಿರದ ಕಟ್ಟಡದಲ್ಲಿ ದತ್ತು ಸ್ವೀಕಾರ ಕೇಂದ್ರ ಪ್ರಾರಂಭಿಸಲಾಗುವುದು’ ಎಂದು ಜಿಲ್ಲಾ ಮಹಿಳಾ ರಕ್ಷಣಾಧಿಕಾರಿ ಸವಿತಾ ಮಾಹಿತಿ ನೀಡಿದರು.

‘ಗ್ರಾಮೀಣ ಹಾಗೂ ನಗರ ವ್ಯಾಪ್ತಿಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನವನ್ನು ಗುರುತಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಈಗಾಗಲೇ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ಶೀಘ್ರ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಅಭಿನವ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.