ಹಿರಿಯೂರು: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯ ವೈದ್ಯರು ಗೈರುಹಾಜರಾಗುತ್ತಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಭಾರತೀಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ತಾಲ್ಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

‘ಹಿರಿಯೂರು ತಾಲ್ಲೂಕು ಅಪಘಾತ ವಲಯ ಎಂದೇ ಕುಖ್ಯಾತಿ ಪಡೆದಿದೆ. ರಾತ್ರಿ ವೇಳೆ ಅಪಘಾತ ಸಂಭವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತಂದರೆ ಅಲ್ಲಿ ವೈದ್ಯರೇ ಇರುವುದಿಲ್ಲ. ಹಾಜರಿರುವ ಸಿಬ್ಬಂದಿಯನ್ನು ಪ್ರಶ್ನಿಸಿದರೆ, ಅಲ್ಲಿದ್ದಾರೆ, ಇಲ್ಲಿದ್ದಾರೆ, ಈಗ ಬರುತ್ತಾರೆ, ಆಗ ಬರುತ್ತಾರೆ ಎಂದು ಸಬೂಬು ಹೇಳುತ್ತಾರೆ. ಹಣ ಕೊಡದಿದ್ದರೆ ಗಾಯಕ್ಕೆ ಬ್ಯಾಂಡೇಜ್ ಕಟ್ಟುವುದಿಲ್ಲ. ವೈದ್ಯರ ಗೈರುಹಾಜರಿ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳಿದ್ದರೂ ಸಂಬಂಧಿಸಿದವರು ಸರಿಪಡಿಸಿಲ್ಲ’ ಎಂದು ಮುಖಂಡರು ಆರೋಪಿಸಿದರು.

‘ನ.12 ರಂದು ಲಕ್ಷ್ಮೀಪತಿ ಎಂಬುವವರು ಚಿಕಿತ್ಸೆ ಪಡೆಯಲೆಂದು ಹೋದಾಗ ರಾತ್ರಿ ಪಾಳಿಯ ವೈದ್ಯರು ಇರಲಿಲ್ಲ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದ ಅವರು ₹ 50 ಲಂಚ ನೀಡಿ ನರ್ಸ್ಗಳಿಂದ ಚಿಕಿತ್ಸೆ ಪಡೆದು ಹೊರಬಂದಿದ್ದಾರೆ. ಆ ರಾತ್ರಿ ಕರ್ತವ್ಯದ ಮೇಲೆ ಇರಬೇಕಿದ್ದ ವೈದ್ಯರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು’ ಎಂದು ಸಮಿತಿ ರಾಜ್ಯ ಘಟಕದ ಕಾರ್ಯಾಧ್ಯಕ್ಷ ತಿಮ್ಮರಾಜು, ಚಿದಾನಂದ, ಎಚ್.ರಾಜಣ್ಣ, ಮೋಹನ್ ಕುಮಾರ್ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.