ಮೊಳಕಾಲ್ಮುರು: ದರ ಕುಸಿತದಿಂದ ತರಕಾರಿ ಬೆಳೆಗಾರರು ಕಂಗಾಲಾಗಿದ್ದು, ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿಬುಧವಾರ ಇಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೆಇಬಿ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮುಖ್ಯಬೀದಿಯಲ್ಲಿ ಸಾಗಿತು. ಇದಕ್ಕೂ ಮೊದಲು ತರಕಾರಿಯನ್ನು ರಸ್ತೆಗೆ ಸುರಿದು ಕೆಲಕಾಲಸಾಂಕೇತಿಕ ರಸ್ತೆ ತಡೆ ನಡೆಸಿದ ರೈತರು ಸಾಲಮನ್ನಾಕ್ಕೆ ಆಗ್ರಹಿಸಿದರು.

ಈರುಳ್ಳಿ, ಟೊಮೆಟೊ ಸೇರಿದಂತೆ ಅನೇಕ ತರಕಾರಿಗಳ ಬೆಲೆ ಕುಸಿದಿದೆ. ಈ ಸ್ಥಿತಿಯಲ್ಲಿ ಬ್ಯಾಂಕ್‌ಗಳುಸಾಲವನ್ನು ಕಟ್ಟುವಂತೆ ಪೀಡಿಸುತ್ತಿವೆ. ಕೇಂದ್ರಮತ್ತು ರಾಜ್ಯ ಸರ್ಕಾರಗಳು ರೈತರ ಉತ್ಪನ್ನಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕು. ಸಾಲ ಮನ್ನಾ ಮಾಡಬೇಕು. ಸಾಲ ಮರುಪಾವತಿಗೆ ಪೀಡಿಸುವ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಬೇಕು ಎಂದು ಸಂಘದ ರಾಜ್ಯ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಆಗ್ರಹಿಸಿದರು.

ತಾಲ್ಲೂಕು ಅಧ್ಯಕ್ಷ ಮರ್ಲಹಳ್ಳಿ ರವಿಕುಮಾರ್, ಕಾರ್ಯದರ್ಶಿ ಕೋನಸಾಗರ ಮಂಜುನಾಥ್, ವೀರೇಶ್, ಭಾನು, ಬಸವರಾಜ್, ಈರಣ್ಣ, ಮಂಜಣ್ಣ,ಚಂದ್ರಣ್ಣ, ಸೂರಮ್ಮನಹಳ್ಳಿ ರಾಜಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.