ಹೊಸದುರ್ಗ (ಚಿತ್ರದುರ್ಗ): ಕೊಬ್ಬರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ತಾಲ್ಲೂಕಿನ ಜಯಸುರ್ವಣಪುರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಚಿಕ್ಕಬ್ಯಾಲದಕೆರೆ ಗ್ರಾಮದ ಜಗದೀಶ್ ಎಂಬುವವರಿಗೆ ಸೇರಿದ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ. ಗೋದಾಮಿನಲ್ಲಿದ್ದ ಎಲ್ಲ ಕೊಬ್ಬರಿ ಹೊತ್ತಿ ಉರಿದಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಜಗದೀಶ್ ಅವರು ಜಯಸುವರ್ಣಪುರ ಗ್ರಾಮದ ತೋಟದಲ್ಲಿ ಗೋದಾಮು ನಿರ್ಮಿಸಿ ಕೊಬ್ಬರಿ ಸಂಗ್ರಹಿಸಿದ್ದರು. ಮಂಗಳವಾರ ರಾತ್ರಿ ಗೋದಾಮಿಗೆ ಬೆಂಕಿ ಬಿದ್ದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಿದರು ಎಂದು ಮೂಲಗಳು ಮಾಹಿತಿ ನೀಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.