ಹೊಸದುರ್ಗ (ಚಿತ್ರದುರ್ಗ ಜಿಲ್ಲೆ): ‘ವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕು’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ಗುರುವಾರ ಆರಂಭವಾದ ರಾಷ್ಟ್ರೀಯ ನಾಟಕೋತ್ಸವದ ಉದ್ಘಾಟನೆ ಸಮಾರಂಭದಲ್ಲಿ ಶಿವ ಧ್ವಜಾರೋಹಣ ನೇರವೇರಿಸಿದ ಬಳಿಕ ಅವರು ಆಶೀರ್ವಚನ ನೀಡಿದರು.

ಗಣಪತಿಯನ್ನು ಸ್ತುತಿಸುವುದು ಮೌಢ್ಯದ ಆಚರಣೆ. ವಚನಗಳನ್ನು ಪ್ರಸ್ತುತಪಡಿಸುವುದು ನಿಜವಾದ ಪ್ರಾರ್ಥನೆ. ಕಾರ್ಯಕ್ರಮಗಳ ಆರಂಭದಲ್ಲಿ ವಚನಗಳನ್ನೂ ಹಾಡಬಹುದು ಎಂದು ತೋರಿಸಿದವರು ಶಿವಕುಮಾರ ಸ್ವಾಮೀಜಿ’ ಎಂದು ಅವರು ತಿಳಿಸಿದರು.

‘ಗಣಪತಿ ಕಾಲ್ಪನಿಕ ದೇವರು. ಸ್ವಾತಂತ್ರ್ಯ ಚಳವಳಿ ಸಂದರ್ಭದಲ್ಲಿ ನೆಪಮಾತ್ರಕ್ಕೆ ಹುಟ್ಟಿಕೊಂಡ ದೇವರದು. ಬಾಹ್ಯ ವಸ್ತುಗಳಿಂದ ಮಾಡಿದ ದೇವರುಗಳು ದೇವರಲ್ಲ. ಮನೆಗಳಲ್ಲಿ ಅಥವಾ ಯಾವುದೇ ಸಮಾರಂಭಗಳಲ್ಲಿ ಮೊದಲು ಗಣಪತಿ ಪೂಜೆ, ಸ್ತೋತ್ರ ಹಾಗೂ ಶ್ಲೋಕ ಪಠಿಸಬೇಕು ಎಂಬುದು ಹಲವರ ನಂಬಿಕೆಯಾಗಿದೆ. ಅದರ ಬದಲು ವಚನಗಳನ್ನೇ ಪ್ರಾರ್ಥನೆಯಂತೆ ಪಠಿಸಬೇಕು’ ಎಂದು ಸಲಹೆ ನೀಡಿದರು.

‘ಶರಣರ ಪ್ರಕಾರ ಸ್ವಸಾಮರ್ಥ್ಯ, ಉತ್ತಮ ನಡವಳಿಕೆ ಹೊಂದಿದವರೇ ನಿಜವಾದ ದೇವರು. ನಮ್ಮನ್ನು ನಾವು ನಂಬಬೇಕು. ಶರಣರ ಆಶಯಗಳಂತೆ ಬದುಕಬೇಕು. ಈ ನಿಟ್ಟಿನಲ್ಲಿ ಆತ್ಮಾವಲೋಕನ ಅಗತ್ಯ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.